ಹುಂಡಿಯಲ್ಲಿ 52.17 ಲಕ್ಷ ರೂ. ಸಂಗ್ರಹ

6 HNL
Published on

ಹೊನ್ನಾಳಿ: ತಾಲೂಕಿನ ಸುಂಕದಕಟ್ಟೆ ಗ್ರಾಮದ ಎ- ಶ್ರೇಣಿಯ ಮುಜರಾಯಿ ಇಲಾಖೆಗೆ ಸೇರಿದ ನರಸಿಂಹಸ್ವಾಮಿ ಹಾಗೂ ಮಂಜುನಾಥಸ್ವಾಮಿ ದೇವಸ್ಥಾನದಲ್ಲಿ ಮಂಗಳವಾರ ಹುಂಡಿ ಎಣಿಕೆ ನಡೆಯಿತು. 52.17 ಲಕ್ಷ ರೂ. ಕಾಣಿಕೆ ಹಣ ಸಂಗ್ರಹವಾಗಿದೆ ಎಂದು ತಹಸೀಲ್ದಾರ್ ಪಟ್ಟರಾಜುಗೌಡ ತಿಳಿಸಿದರು.

ಈ ವೇಳೆ ಗ್ರಾಮದ ಸಮುದಾಯ ಭವನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಮುಜರಾಯಿ ಇಲಾಖೆಗೆ ಸೇರಿದ ನರಸಿಂಹಸ್ವಾಮಿ ಹಾಗೂ ಮಂಜುನಾಥಸ್ವಾಮಿ ದೇವಸ್ಥಾನವು ಮಧ್ಯ ಕರ್ನಾಟಕದಲ್ಲಿ ಪ್ರಸಿದ್ಧಿ ಪಡೆದಿದೆ. ದೇವಸ್ಥಾನ ಮತ್ತು ಸಮುದಾಯ ಭವನದ ಅಭಿವೃದ್ಧಿಗೆ ಸಮಿತಿಯವರು ಮನವಿ ಮಾಡಿದ್ದಾರೆ. ಈ ಮನವಿಯನ್ನು ಜಿಲ್ಲಾಧಿಕಾರಿಗಳ ಗಮನಕ್ಕೆ ತಂದು ಅಭಿವೃದ್ಧಿ ಮಾಡುವುದಾಗಿ ಹೇಳಿದರು.

ಸಮುದಾಯ ಭವನ ಇನ್ನೂ ಕಾಮಗಾರಿ ಹಂತದಲ್ಲೇ ಇದೆ. ಇದಕ್ಕೆ ಇನ್ನೂ ಒಂದು ಕೋಟಿ ಅನುದಾನದ ಕೊರತೆ ಇದ್ದು, ನಾವು ಸಹ ಮುಜರಾಯಿ ಆಯುಕ್ತರಿಗೆ ಪತ್ರ ಬರೆದು ಒಂದು ಕೋಟಿ ರೂ. ಅನುದಾನ ಬಿಡುಗಡೆ ಮಾಡುವಂತೆ ಮನವಿ ಮಾಡಿದ್ದೇವೆ ಎಂದರು.

ಪ್ರಧಾನ ಅರ್ಚಕ ರಾಜುಸ್ವಾಮಿ ಮಾತನಾಡಿ, ಮುಂದಿನ ವಾರದಲ್ಲಿ ನರಸಿಂಹಸ್ವಾಮಿ ಹಾಗೂ ಮಂಜುನಾಥಸ್ವಾಮಿ ರಥೋತ್ಸವ ನಡೆಯಲಿದೆ. ತ್ವರಿತಗತಿಯಲ್ಲಿ ದೇವಾಸ್ಥನಕ್ಕೆ ಮೂಲ ಸೌಲಭ್ಯಗಳನ್ನು ಒದಗಿಸುವಂತೆ ತಹಸೀಲ್ದಾರ್ ಮೂಲಕ ಜಿಲ್ಲಾಕಾರಿಗಳಿಗೆ ಮನವಿ ಮಾಡಿದ್ದೇವೆ ಎಂದರು

ಹುಂಡಿ ಹಣ ಎಣಿಕೆ ವೇಳೆ ಮುಜರಾಯಿ ಇಲಾಖೆಯ ಜಿಲ್ಲಾ ಕಾರ್ಯನಿರ್ವಣಾಧಿಕಾರಿ ಕೃಷ್ಣಪ್ಪ, ರಾಜಸ್ವ ನಿರೀಕ್ಷಕ ರಮೇಶ್, ಎಸ್.ಕೆ. ಕರಿಯಪ್ಪ, ಎಸ್.ಜಿ. ಮಂಜಪ್ಪ, ರೈತ ಮುಖಂಡ ಕರಿಬಸಪ್ಪ ಹಾಗೂ 20 ಕ್ಕೂ ಹೆಚ್ಚು ಕಂದಾಯ ಇಲಾಖೆ ಅಧಿಕಾರಿಗಳು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net