ಶಿಕ್ಷಕರನ್ನು ತರಾಟೆಗೆ ತೆಗೆದುಕೊಂಡ ತಹಸೀಲ್ದಾರ್

17HDK02
Published on

ಮೈಸೂರು ಎಚ್.ಡಿ.ಕೋಟೆ ತಾಲೂಕಿನ ರಾಜೇಗೌಡನಹುಂಡಿ ಶಾಲೆಯಲ್ಲಿ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಭಾವಚಿತ್ರ ಇಡದೆ ಸ್ವಾತಂತ್ರೊೃೀತ್ಸವ ದಿನ ಆಚರಿಸಲಾಗಿದ್ದು, ಈ ಬಗ್ಗೆ ಕ್ರಮ ತೆಗೆದುಕೊಳ್ಳಬೇಕು ಎಂದು ಗ್ರಾಮಸ್ಥರು ಒತ್ತಾಯಿಸಿದ ಹಿನ್ನೆಲೆಯಲ್ಲಿ ತಹಸೀಲ್ದಾರ್ ರತ್ನಾಂಬಿಕೆ ಗುರುವಾರ ಶಾಲೆಗೆ ಭೇಟಿ ನೀಡಿ, ಶಿಕ್ಷಕರನ್ನು ತರಾಟೆಗೆ ತೆಗೆದುಕೊಂಡರು.


ಕ್ಷೇತ್ರ ಶಿಕ್ಷಣಾಧಿಕಾರಿ ಉದಯಕುಮಾರ್, ಪೊಲೀಸ್ ಇನ್ಸ್‌ಪೆಕ್ಟರ್ ಬಸವರಾಜು, ಸಮಾಜ ಕಲ್ಯಾಣ ಇಲಾಖೆ ಅಧಿಕಾರಿ ರಾಮಸ್ವಾಮಿ ಅವರೊಂದಿಗೆ ರಾಜೇಗೌಡನಹುಂಡಿ ಗ್ರಾಮದ ಶಾಲೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ರತ್ನಾಂಬಿಕೆ ಅವರು, ಶಾಲೆಯ ಮುಖ್ಯ ಶಿಕ್ಷಕ ಯತೀಶ್ ಕುಮಾರ್ ಹಾಗೂ ಸಹ ಶಿಕ್ಷಕರಿಂದ ಮಾಹಿತಿ ಪಡೆದರು. ಶಿಕ್ಷಕರ ಉತ್ತರದಿಂದ ಸಮಾಧಾನಗೊಳ್ಳದ ತಹಸೀಲ್ದಾರ್ ರತ್ನಾಂಬಿಕೆ ಅವರು, ತರಾಟೆಗೆ ತೆಗೆದುಕೊಂಡು, ಸರ್ಕಾರಕ್ಕೆ ವರದಿ ಸಲ್ಲಿಸಲಾಗುವುದು ಎಂದು ಎಚ್ಚರಿಕೆ ನೀಡಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net