ಗಣರಾಜ್ಯೋತ್ಸವಕ್ಕೆ ಆಯ್ಕೆಯಾದ ತೇಜಸ್ವಿನಿ: ಪದವಿ ಪೂರ್ವ ಕಾಲೇಜುಗಳ ಪ್ರತಿನಿಧಿಯಾಗಿ ಭಾಗಿ

Tejaswini selected for Republic Day Mandya
Published on

ಮಂಡ್ಯ: ದೆಹಲಿಯಲ್ಲಿ ಜ.26ರಂದು ನಡೆಯಲಿರುವ 75ನೇ ಗಣರಾಜ್ಯೋತ್ಸವ ಸಮಾರಂಭದಲ್ಲಿ ಭಾಗವಹಿಸಲು ಮಂಡ್ಯ ನಗರದ ಪಿಇಎಸ್ ಪದವಿ ಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವಿದ್ಯಾರ್ಥಿನಿ ಎಚ್.ಬಿ.ತೇಜಸ್ವಿನಿ ಆಯ್ಕೆಯಾಗಿದ್ದಾರೆ.

ರಾಜ್ಯದ ಎಲ್ಲ ಪದವಿ ಪೂರ್ವ ಕಾಲೇಜುಗಳ ಪ್ರತಿನಿಧಿಯಾಗಿ ಎಚ್.ಬಿ.ತೇಜಸ್ವಿನಿ ಭಾಗವಹಿಸಲಿದ್ದು, ಈ ಮೂಲಕ ಮಂಡ್ಯ ಜಿಲ್ಲೆಯ ಕೀರ್ತಿಯನ್ನು ಹೆಚ್ಚಿಸಿದ್ದಾರೆ. ತೇಜಸ್ವಿನಿಯನ್ನು ಪಿಇಟಿ ಟ್ರಸ್ಟ್ ಅಧ್ಯಕ್ಷ ಕೆ.ಎಸ್.ವಿಜಯಾನಂದ ಸೇರಿದಂತೆ ಆಡಳಿತ ಮಂಡಳಿ,ಪ್ರಾಂಶುಪಾಲರು, ರಾಷ್ಟ್ರೀಯ ಸೇವಾ ಯೋಜನೆಯ ಕಾರ್ಯಕ್ರಮಾಧಿಕಾರಿ ಹಾಗೂ ಕಾಲೇಜಿನ ಸಿಬ್ಬಂದಿ ಅಭಿನಂದಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net