ತೆಕ್ಕಲಕೋಟೆಯ ಪ್ರೌಢಶಾಲೆಗೆ ಲೋಕಾಯುಕ್ತ ಡಿವೈಎಸ್ಪಿ ದಿಢೀರ್ ಭೇಟಿ, ಆಹಾರ ಧಾನ್ಯ ಪರಿಶೀಲನೆ

Tekkalakote DYsp Visit High School
ತೆಕ್ಕಲಕೋಟೆಯ ಬಾಲಕರ ಸರ್ಕಾರಿ ಪ್ರೌಢಶಾಲೆಗೆ ಜಿಲ್ಲಾ ಲೋಕಾಯುಕ್ತ ಡಿವೈಎಸ್ಪಿ ಸಲೀಂ ಪಾಷಾ ಶುಕ್ರವಾರ ಭೇಟಿ ನೀಡಿ ವಿದ್ಯಾರ್ಥಿಗಳಿಗೆ ವಿತರಿಸುವ ಆಹಾರ ಧಾನ್ಯಗಳನ್ನು ಪರಿಶೀಲಿಸಿದು. ಶಿಕ್ಷಕರಾದ ರಮೇಶ, ಆಜಾದ ಇತರರಿದ್ದರು.
Published on

ಸಿರಗುಪ್ಪ: ತಾಲೂಕಿನ ತೆಕ್ಕಲಕೋಟೆಯ ಬಾಲಕರ ಸರ್ಕಾರಿ ಪ್ರೌಢಶಾಲೆಗೆ ಜಿಲ್ಲಾ ಲೋಕಾಯುಕ್ತ ಡಿವೈಎಸ್ಪಿ ಸಲೀಂ ಪಾಷಾ ಶುಕ್ರವಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಕೋವಿಡ್‌ನಿಂದಾಗಿ ಪ್ರಸಕ್ತ ವರ್ಷ ತಡವಾಗಿ ಪ್ರೌಢಶಾಲೆ ಆರಂಭವಾಗಿವೆ. ಕರೊನಾ ನಿಯಮಗಳನ್ನು ಕಡ್ಡಾಯವಾಗಿ ಅನುಸರಿಸುವ ಮೂಲಕ ವಿದ್ಯಾರ್ಥಿಗಳಿಗೆ ಬೋಧನೆ ಮಾಡಬೇಕು. ಸುರಕ್ಷತೆಯ ದೃಷ್ಟಿಯಿಂದ ಪ್ರತಿಯೊಬ್ಬ ಶಿಕ್ಷಕರು, ಸಿಬ್ಬಂದಿ ಮತ್ತು ವಿದ್ಯಾರ್ಥಿಗಳು ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು. ತರಗತಿ ನಡೆಯುವ ಕೊಠಡಿಗಳನ್ನು ಸ್ಯಾನಿಟೈಸ್ ಮಾಡಬೇಕು. ದೈಹಿಕ ಅಂತರ ಕಾಪಾಡಬೇಕು ಎಂದು ಶಿಕ್ಷಕರಿಗೆ ಸೂಚಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net