ಟೆಕ್ವಾಂಡೊ ಶಕ್ತಿ ವಿದ್ಯಾರ್ಥಿ ರಿಜ್ವಿತ್ ರಾಷ್ಟ್ರ ಮಟ್ಟಕ್ಕೆ

mng-10dec-Rjvith jagadish
Published on

ಮಂಗಳೂರು : ಹಾವೇರಿಯ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆದ ರಾಜ್ಯ ಮಟ್ಟದ ಪದವಿಪೂರ್ವ ಕಾಲೇಜುಗಳ ಬಾಲಕ-ಬಾಲಕಿಯರ ಟೆಕ್ವಾಂಡೊ ಚಾಂಪಿಯನ್‌ಶಿಪ್‌ನಲ್ಲಿ ಶಕ್ತಿ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿ ರಿಜ್ವಿತ್ ಜಗದೀಶ್ ಪ್ರಥಮ ಸ್ಥಾನ ಪಡೆದು ರಾಷ್ಟ್ರೀಯ ಮಟ್ಟಕ್ಕೆ ಅಯ್ಕೆಯಾಗಿದ್ದಾರೆ. ಬಾಲಕಿಯರ ವಿಭಾಗದಲ್ಲಿ ಹರ್ಷವೇಣಿ ಕಂಚಿನ ಪದಕ ಗೆದ್ದಿದ್ದಾರೆ. ಕ್ರೀಡಾ ಸಾಧಕರನ್ನು
ಸಂಸ್ಥೆಯ ಸಂಸ್ಥಾಪಕ ಡಾ.ಕೆ. ಸಿ. ನಾಕ್, ಕಾರ್ಯದರ್ಶಿ ಸಂಜಿತ್ ನಾಕ್, ಪ್ರಧಾನ ಸಲಹೆಗಾರ ರಮೇಶ್ ಕೆ. , ಶಕ್ತಿ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ವೆಂಕಟೇಶ ಮೂರ್ತಿ ಮತ್ತು ಶಕ್ತಿ ವಸತಿ ಶಾಲೆಯ ಪ್ರಾಂಶುಪಾಲೆ ಬಬಿತಾ ಸೂರಜ್ ಅಭಿನಂದಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net