

ರಾಯಚೂರು : ತೆಲಂಗಾಣದಿಂದ ಟ್ರಕ್ನಲ್ಲಿ ರಾಜ್ಯಕ್ಕೆ ಹಿಂದಿರುಗುತ್ತಿದ್ದ 7 ಮಂದಿ ಕೂಲಿ ಕಾರ್ಮಿಕರು ಅಪಘಾತದಲ್ಲಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಲಾರಿ ಹಾಗೂ ಟ್ರಕ್ ನಡುವೆ ತೆಲಂಗಾಣದ ಶಂಷಾಬಾದ್ ಬಳಿ ಭೀಕರ ಅಪಘಾತ ಸಂಭವಿಸಿದೆ. ಇಬ್ಬರು ಮಕ್ಕಳು ಸೇರಿ 7 ಮಂದಿ ಮೃತಪಟ್ಟಿದ್ದಾರೆ. ಮೃತಪಟ್ಟವರು ಕೂಲಿ ಕಾರ್ಮಿಕರು ಎಂದು ತಿಳಿದು ಬಂದಿದೆ.
ರಾಯಚೂರು ಜಿಲ್ಲೆಯ ಲಿಂಗಸಗೂರು ತಾಲೂಕಿನ ರಾಯದುರ್ಗದ ನಾಲ್ವರು, ಬಾಗಲ ಕೋಟೆಯ ಇಬ್ಬರು ಅಪಘಾತದಲ್ಲಿ ಮೃತಪಟ್ಟಿದ್ದಾರೆ. ಉಳಿದ ಇಬ್ಬರ ಮಾಹಿತಿ ಲಭ್ಯವಾಗಿಲ್ಲ.
ಗಾಯಗೊಂಡವರನ್ನು ಸ್ಥಳೀಯ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಟ್ರಕ್ನಲ್ಲಿ 30 ಮಂದಿ ಕಾರ್ಮಿಕರು ಇದ್ದರು. ಇವರು ರಾಜ್ಯದ ವಿವಿಧ ಜಿಲ್ಲೆಗಳ ಕೂಲಿ ಕಾರ್ಮಿಕರು. ಕೆಲಸಕ್ಕಾಗಿ ತೆಲಂಗಾಣಕ್ಕೆ ತೆರಳಿದ್ದರು. ಕರೊನಾ ಸೋಂಕು ಹಿನ್ನೆಲೆಯಲ್ಲಿ ಲಾಕ್ಡೌನ್ ಆದ ಪರಿಣಾಮ ಅವರು ತಮ್ಮ ಗ್ರಾಮಗಳಿಗೆ ಹಿಂದಿರುಗುತ್ತಿದ್ದರು. (ದಿಗ್ವಿಜಯ ನ್ಯೂಸ್)