ಸಿಎಂ ಸಿದ್ದರಾಮಯ್ಯರನ್ನು ಗೌರವಿಸಿದ ತೆಲುಗು ನಟ ರಾಮ್‌ಚರಣ್

Ramcharan
Published on

ಮೈಸೂರು: ತೆಲುಗು ನಟ ರಾಮ್‌ಚರಣ್ ಭಾನುವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ನಗರದ ಅವರ ನಿವಾಸದಲ್ಲಿ ಭೇಟಿಯಾಗಿ ಗೌರವ ಸಲ್ಲಿಸಿದರು.

ರಾಮ್‌ಚರಣ್ ನಗರದಲ್ಲಿ ‘ಪೆದ್ದಿ’ ಚಿತ್ರದ ಚಿತ್ರೀಕರಣದಲ್ಲಿ ನಿರತರಾಗಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ನಗರಕ್ಕೆ ಭೇಟಿ ನೀಡಿರುವ ವಿಚಾರ ತಿಳಿದ ರಾಮ್‌ಚರಣ್ ಸಿಎಂ ನಿವಾಸಕ್ಕೆ ತೆರಳಿ ಶಾಲು ಹೊದಿಸಿ, ಹೂಗುಚ್ಛ ನೀಡಿ ಗೌರವಿಸಿದರು. ಇದೇ ವೇಳೆ ರಾಮ್ ಚರಣ್ ಅವರನ್ನು ಸಿಎಂ ಶಾಲು ಹೊದಿಸಿ, ಹೂಗುಚ್ಛ ನೀಡಿ ಗೌರವಿಸಿದರು. ಈ ಸಂದರ್ಭ ಕಾರ್ಮಿಕ ಸಚಿವ ಸಂತೋಷ್ ಲಾಡ್, ವಿಧಾನ ಪರಿಷತ್ ಸದಸ್ಯ ಡಾ.ಯತೀಂದ್ರ ಸಿದ್ದರಾಮಯ್ಯ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net