

ಮಡಿಕೇರಿ:
ಶ್ರೀ ಬೈತೂರಪ್ಪ ಪೊವ್ವದಿ ಬಸವೇಶ್ವರ ದೇವಾಲಯದಲ್ಲಿ ಮಾ.೨೨ ರಂದು ಯುಗಾದಿ ಹಬ್ಬಾಚರಣೆ ಹಾಗೂ ಏ.೧೦ ರಂದು ದೇವಾಲಯದ ವಾರ್ಷಿಕ ಉತ್ಸವ ನಡೆಯಲಿದೆ. ಮಾ.೨೨ ರಂದು ಯುಗಾದಿ ಹಬ್ಬಾಚರಣೆ ಪ್ರಯುಕ್ತ ಬೆಳಿಗ್ಗೆ ೭ ಗಂಟೆಯಿಂದ ವಿಶೇಷ ಪೂಜೆ, ಪಂಚಾಂಗ ಶ್ರವಣ ಮತ್ತು ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ ನಡೆಯಲಿದೆ. ಮಧ್ಯಾಹ್ನ ೧೨ ಗಂಟೆಗೆ ಮಹಾಪೂಜೆ ನಂತರ ಅನ್ನಸಂತರ್ಪಣೆ ನೆರವೇರಲಿದೆ. ವಾರ್ಷಿಕ ಉತ್ಸವದ ಪ್ರಯುಕ್ತ ಏ.೧೦ ರಂದು ಬೆಳಿಗ್ಗೆ ೭ ಗಂಟೆಗೆ ಮಹಾಗಣಪತಿ ಹೋಮ, ಮಧ್ಯಾಹ್ನ ೧೨ ಗಂಟೆಗೆ ಮಹಾ ಪೂಜೆ ಹಾಗೂ ತೀರ್ಥ ಪ್ರಸಾದ ವಿತರಣೆ ನಡೆಯಲಿದ್ದು, ೧ ಗಂಟೆಗೆ ತಕ್ಕರ ಮನೆಯಿಂದ ಬಂಡಾರ ತರುವುದು, ೧.೩೦ ಗಂಟೆಗೆ ಹಬ್ಬಾಚರಣೆ ನಂತರ ಅನ್ನಸಂತರ್ಪಣೆ ನೆರವೇರಲಿದೆ ಎಂದು ದೇವಾಲಯ ಟ್ರಸ್ಟ್‌ನ ಅಧ್ಯಕ್ಷರು, ಸದಸ್ಯರು ಮನವಿ ಮಾಡಿದ್ದಾರೆ.