ಪುತ್ತೂರಲ್ಲಿ ಏಕ ಬಿಲ್ವಂ ಶಿವಾರ್ಪಣಂ

PTR_26 FEB_3
Published on

ಪುತ್ತೂರು: ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಮಹಾಶಿವರಾತ್ರಿಯ ಅಂಗವಾಗಿ ಬುಧವಾರ ವಿವಿಧ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು. ಬೆಳಗ್ಗಿನಿಂದಲೇ ಭಕ್ತರು ಸಾಲುಗಟ್ಟಿ ನಿಂತು ವಿವಿಧ ಸೇವೆಗಳನ್ನು ನೆರವೇರಿಸಿದರು.

ಬೆಳಗ್ಗೆ ಏಕ ಬಿಲ್ವಂ ಶಿವಾರ್ಪಣಂ, ಶತರುದ್ರಾಭಿಷೇಕ, ರುದ್ರಯಾಗ ಸಂಪನ್ನಗೊಂಡಿತು.

ಏಕ ಬಿಲ್ವಂ ಶಿವಾರ್ಪಣಂ ಕಾರ್ಯಕ್ರಮದ ಮೂಲಕ ನೇರವಾಗಿ ದೇವರಿಗೆ ಬಿಲ್ವ ಸಮರ್ಪಣೆ ಮಾಡುವ ಅವಕಾಶವನ್ನು ಭಕ್ತರಿಗೆ ಕಲ್ಪಿಸಲಾಗಿತ್ತು. ಮಧ್ಯಾಹ್ನ ಮಹಾಮಂಗಳಾರತಿ ನಡೆಯಿತು. ವಿವಿಧ ಭಜನಾ ತಂಡಗಳಿಂದ ಅಖಂಡ ಭಜನಾ ಕಾರ್ಯಕ್ರಮ, ನಟರಾಜ ವೇದಿಕೆಯಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.

ದೇವಳದ ಪ್ರಧಾನ ಅರ್ಚಕ ವಸಂತ ಕೆದಿಲಾಯ, ವಿ.ಎಸ್. ಭಟ್ ನೇತೃತ್ವದಲ್ಲಿ ಧಾರ್ಮಿಕ ಕಾರ್ಯಕ್ರಮಗಳು ನಡೆದವು. ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಈಶ್ವರ ಭಟ್ ಪಂಜಿಗುಡ್ಡೆ, ಸದಸ್ಯರಾದ ಮಹಾಬಲ ರೈ ವಳತ್ತಡ್ಕ, ವಿನಯ ಸುವರ್ಣ, ಸುಭಾಶ್ ರೈ ಬೆಳ್ಳಿಪ್ಪಾಡಿ, ದಿನೇಶ್ ಪಿ.ವಿ., ನಳಿನಿ ಪಿ. ಶೆಟ್ಟಿ, ಈಶ್ವರ ಬೇಡೆಕರ್, ಕೃಷ್ಣವೇಣಿ, ಕಾರ್ಯನಿರ್ವಣಾಽಕಾರಿ ಕೆ.ವಿ.ಶ್ರೀನಿವಾಸ್, ಹರೀಶ್ ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು.

ದಾಖಲೆಯ ಸೇವೆ

ಬಿಲ್ಬಾರ್ಚನೆ, ಶತರುದ್ರ, ಅಪ್ಪಕಜ್ಜಾಯ ಸೇರಿ ವಿವಿಧ ಸೇವಾ ಕಾರ್ಯಗಳಲ್ಲಿ ಭಕ್ತರು ದಾಖಲೆ ಸಂಖ್ಯೆಯಲ್ಲಿ ತೊಡಗಿಸಿಕೊಂಡಿದ್ದಾರೆ. ಕಳೆದ ವರ್ಷಕ್ಕೆ ಹೋಲಿಸಿದರೆ ಎಲ್ಲ ಸೇವೆಗಳು ದುಪ್ಪಟ್ಟು ಸಂಖ್ಯೆಯಲ್ಲಿ ಆಗಿವೆ. ಅನ್ನ ಸಂತರ್ಪಣೆಯಲ್ಲಿ ೬ ಸಾವಿರಕ್ಕೂ ಅಽಕ ಮಂದಿ ಭಾಗವಹಿಸಿ ಪ್ರಸಾದ ಭೋಜನ ಸೇವಿಸಿದ್ದಾರೆ.

ದೇವಸ್ಥಾನದಲ್ಲಿ ಭಕ್ತರಿಗೆ ಯಾವ ರೀತಿಯಲ್ಲೂ ಸಮಸ್ಯೆಯಾಗಬಾರದೆಂಬ ನಿಟ್ಟಿನಲ್ಲಿ ಹೆಚ್ಚಿನ ಜನರನ್ನು ನೇಮಿಸಿಕೊಂಡು ವ್ಯವಸ್ಥೆಯನ್ನು ಕಲ್ಪಿಸಲಾಗಿದೆ. ಭಕ್ತರೂ ಗೊಂದಲಕ್ಕೆ ಎಡೆಮಾಡಿಕೊಡದೆ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಜತೆಗೆ ಸಹಕಾರ ನೀಡಿದ್ದಾರೆ. ಸರತಿಗಳಲ್ಲೂ ಅಚ್ಚುಕಟ್ಟಿನಲ್ಲಿ ನಿಂತು ಸೇವೆಗಳಲ್ಲಿ ತೊಡಗಿಸಿಕೊಂಡ ಕಾರಣ ವ್ಯವಸ್ಥಾಪನಾ ಸಮಿತಿಗೆ ಕಷ್ಟವಿಲ್ಲದೆ ಕಾರ್ಯಕ್ರಮವನ್ನು ನಡೆಸಲು ಸಾಧ್ಯವಾಗಿದೆ.

| ಈಶ್ವರ ಭಟ್ ಪಂಜಿಗುಡ್ಡೆ

ಅಧ್ಯಕ್ಷರು, ದೇವಳದ ವ್ಯವಸ್ಥಾಪನಾ ಸಮಿತಿ

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net