ದೇವಾಲಯದ 8ನೇ ವಾರ್ಷಿಕೋತ್ಸವ ಸಂಪನ್ನ

Published on

ಕುಶಾಲನಗರ : ಕುಶಾಲನಗರ ತಾಲೂಕು ಹೆಬ್ಬಾಲೆ, ನಡುಬೀದಿ ಹಾಗೂ ಹಳಗೋಟೆ ಗ್ರಾಮದ ವೀರಮಡಿವಾಳರ ಸಂಘ ಮತ್ತು ದೇವಾಲಯ ಸಮಿತಿ ವತಿಯಿಂದ ಏರ್ಪಡಿಸಿದ್ದ ಗ್ರಾಮದ ಶ್ರೀ ಲಕ್ಷ್ಮೀದೇವಿ, ಶ್ರೀ ಗಣಪತಿ, ಶ್ರೀ ಭೈರವೇಶ್ವರ ದೇವಾಲಯದ 8ನೇ ವಾರ್ಷಿಕೋತ್ಸವ ಶುಕ್ರವಾರ ಶ್ರದ್ಧಾಭಕ್ತಿಯಿಂದ ನೆರವೇರಿತು.

ದೇವಾಲಯದ ಅರ್ಚಕ ಚಂದ್ರ ಶೆಟ್ಟಿ ನೇತೃತ್ವದಲ್ಲಿ ಗಣಪತಿ ಹೋಮದೊಂದಿಗೆ ಧಾರ್ಮಿಕ ವಿಧಿವಿಧಾನಗಳು ಸಂಪನ್ನಗೊಂಡವು. ಮುಂಜಾನೆಯಿಂದಲೇ ಕುಂಭಾಭಿಷೇಕ ಸೇರಿದಂತೆ ಕಳಶ ಪೂಜೆ, ಹೂವಿನ ಪೂಜೆ, ಕುಂಕುಮಾ ರ್ಚನೆ ನಡೆಸಲಾಯಿತು. ವಾರ್ಷಿಕೋತ್ಸವದ ಅಂಗವಾಗಿ ದೇವಾಲಯವನ್ನು ತಳಿರು, ತೋರಣ ಮತ್ತು ವಿದ್ಯುತ್ ದೀಪಗಳಿಂದ ಅಲಂಕರಿಸಲಾಗಿತ್ತು.

ಈ ಸಂದರ್ಭ ಮಾತನಾಡಿದ ದೇವಾಲಯ ಸಮಿತಿ ಅಧ್ಯಕ್ಷ ಮಲ್ಲೇಶ, ಗ್ರಾಮದ ವೀರಮಡಿವಾಳ ಸಂಘ ಹಾಗೂ ದೇವಾಲಯ ಸಮಿತಿ ವತಿಯಿಂದ ಹಮ್ಮಿಕೊಂಡಿದ್ದ ವಾರ್ಷಿಕೋತ್ಸವಕ್ಕೆ ಗ್ರಾಮಸ್ಥರು ಹಾಗೂ ದಾನಿಗಳ ಸಹಕಾರ ದೊಡ್ಡದು ಎಂದರು. ದೇವಿಯು ಉತ್ತಮ ಮಳೆ, ಬೆಳೆಯೊಂದಿಗೆ ಸಮೃದ್ಧಿ ಕರುಣಿಸಲಿ ಎಂದು ಪ್ರಾರ್ಥಿಸಲಾಗಿದೆ ಎಂದು ಅವರು ಹೇಳಿದರು.

ಅನುದಾನ ನೀಡುವ ಭರವಸೆ: ಶಾಸಕ ಡಾ. ಮಂತರ್ ಗೌಡ ದೇವಸ್ಥಾನಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದರು. ದೇವಾಲಯದ ಅಭಿವೃದ್ಧಿಗೆ ಅಗತ್ಯ ಅನುದಾನ ಒದಗಿಸಿಕೊಡುವುದಾಗಿ ಇದೇ ಸಂದರ್ಭ ಭರವಸೆ ನೀಡಿದರು. ದೇವಾಲಯ ಸಮಿತಿ ವತಿಯಿಂದ ಶಾಸಕರನ್ನು ಸನ್ಮಾನಿಸಲಾಯಿತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net