ದೇವಸ್ಥಾನ ಮರು ನಿರ್ಮಾಣಕ್ಕೆ ಭೂಮಿ ಪೂಜೆ

18BTP01
Published on

ಬೆಟ್ಟದಪುರ: ಬೆಟ್ಟದಪುರ ಸಮೀಪದ ಚಪ್ಪರದಹಳ್ಳಿ ಗ್ರಾಮದಲ್ಲಿ ಶ್ರೀ ಕೊಳ್ಳಿ ಮಲ್ಲಿಕಾರ್ಜುನ ಸ್ವಾಮಿ ದೇವಸ್ಥಾನ ಮರು ನಿರ್ಮಾಣಕ್ಕೆ ಸೋಮವಾರ ಗ್ರಾಮಸ್ಥರು ಭೂಮಿ ಪೂಜೆ ನೆರವೇರಿಸಿದರು.

ಸುಮಾರು 14ನೇ ಶತಮಾನದ ಇತಿಹಾಸವಿರುವ ಈ ದೇವಸ್ಥಾನವು ಜೋಳರ ಕಾಲದಿಂದಲ್ಲೂ ತನ್ನದೇ ಐತಿಹಾಸಿಕ ಮಹತ್ವ ಹೊಂದಿದೆ. ಗುಡಿಯ ಸುತ್ತಲೂ ವೀರಗಲ್ಲು ಸೇರಿದಂತೆ ಹಲವು ಶಾಸನಗಳು ಲಭ್ಯವಾಗಿವೆ. ಇದೀಗ ಗ್ರಾಮಸ್ಥರು ಮತ್ತು ಭಕ್ತರು ಒಗ್ಗೂಡಿ ದೇಗುಲ ಜೀರ್ಣೋದ್ಧಾರಕ್ಕೆ ಮುಂದಾಗಿರುವುದು ವಿಶೇಷವಾಗಿದೆ. ಈ ಹಿನ್ನೆಲೆಯಲ್ಲಿ ದಶಮಿ ಶುಭ ಮುಹೂರ್ತದಲ್ಲಿ ಭೂಮಿ ಪೂಜೆ ನೆರವೇರಿಸಲಾಗಿದೆ. ಶೀಘ್ರದಲ್ಲಿಯೇ ಕಾಮಗಾರಿ ಆರಂಭವಾಗಲಿದೆ ಎಂದು ಪ್ರಮುಖರು ತಿಳಿಸಿದ್ದಾರೆ.

ಈ ಸಂದರ್ಭದಲ್ಲಿ ದೇವಸ್ಥಾನ ಸಮಿತಿಯ ಪದಾಧಿಕಾರಿಗಳು, ಯಜಮಾನರುಗಳು, ಗ್ರಾಮಸ್ಥರು ಮತ್ತು ಭಕ್ತರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net