ದೇವಸ್ಥಾನದ ವಿಚಾರಕ್ಕೆ ಗಲಾಟೆ: ಜೆಡಿಎಸ್​​ ಮುಖಂಡನಿಂದ ಮಹಿಳೆ ಸೇರಿ ಇಬ್ಬರ ಕೊಲೆ

murder pic
Published on

ತುಮಕೂರು: ದೇವಸ್ಥಾನದ ವಿಚಾರಕ್ಕೆ ಗಲಾಟೆ ನಡೆದಿದ್ದು, ಓರ್ವ ಮಹಿಳೆ ಸೇರಿ ಇಬ್ಬರನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಮಧುಗಿರಿ ತಾಲೂಕಿನ ಮಿಡಿಗೇಶಿ ಗ್ರಾಮದಲ್ಲಿ ನಡೆದಿದೆ.
ರಾಮಾಂಜನಯ್ಯ (48), ಶಿಲ್ಪಾ (38), ಮೃತ ದುರ್ದೈವಿಗಳಾಗಿದ್ದು, ಮಲ್ಲಿಕಾರ್ಜುನ (42) ಎಂಬುವನ ಸ್ಥಿತಿ ಗಂಭೀರವಾಗಿದೆ.

ಘಟನೆ ಹಿನ್ನೆಲೆ:
ಮಿಡಿಗೇಶಿ ಗ್ರಾಮದ ಶ್ರೀಧರ್ ಗುಪ್ತ ಎಂಬಾತ ಗಣಪತಿ ದೇವಸ್ಥಾನ ಜಾಗ ಕಬಳಿಸಲು ಯತ್ನಿಸಿದ್ದ. ಈ ಜಾಗ ಉಳಿಸಿಕೊಳ್ಳಲು ಗ್ರಾಮಸ್ಥರು ಕೋರ್ಟ್ ಮೆಟ್ಟಿಲೇರಿದ್ದರು. ಗ್ರಾಮಸ್ಥರ ಪರವಾಗಿ ನ್ಯಾಯಾಲಯದ ತೀರ್ಪು ಬಂದಿತ್ತು.

ಮೃತ ರಾಮಾಂಜನಯ್ಯ ಹಾಗೂ ಶಿಲ್ಪಾ, ದೇವಸ್ಥಾನದ ಜಾಗ ಉಳಿಸಿಕೊಳ್ಳಲು ಹೋರಾಟ ನಡೆಸಿದ್ರು. ಇದೇ ವಿಚಾರಕ್ಕೆ ರಾಮಾಂಜನಯ್ಯ ಹಾಗೂ ಶಿಲ್ಪಾ ವಿರುದ್ಧ ದ್ವೇಷಕಾರಿದ್ದ ಜೆಡಿಎಸ್​​ ಮುಖಂಡ ಶ್ರೀಧರ್ ಗುಪ್ತ, ಇಂದು ಮನೆಯಲ್ಲಿ ಮಾತನಾಡುತ್ತಿದ್ದಾಗ ಏಕಾಏಕಿ ಸಹಚರರ ಜತೆ ನುಗ್ಗಿ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿದ್ದಾನೆ.

ಸ್ಥಳಕ್ಕೆ ಮಿಡಿಗೇಶಿ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಮೃತದೇಹಗಳನ್ನ ಮಧುಗಿರಿ ಸರ್ಕಾರಿ ಆಸ್ಪತ್ರೆಯ ಶವಗಾರಕ್ಕೆ ರವಾನೆ ಮಾಡಲಾಗಿದೆ.


ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net