ಮಾರಿಕಾಂಬ ದೇವಸ್ಥಾನದ ಬೀಗ ಮುರಿದು ಕಳ್ಳತನ

Thief
Published on

ಹಿರೇಕೆರೂರ: ದೇವಸ್ಥಾನದ ಬೀಗ ಮುರಿದು ದೇವಿಯ ಮೈ ಮೇಲಿದ್ದ 50 ಸಾವಿರ ರೂ. ಮೌಲ್ಯದ ಚಿನ್ನಾಭರಣ ದೋಚಿದ ಘಟನೆ ತಾಲೂಕಿನ ಸುತ್ತಕೋಟಿ ಗ್ರಾಮದ ಮಾರಿಕಾಂಬ ದೇವಸ್ಥಾನದಲ್ಲಿ ಭಾನುವಾರ ಸಂಭವಿಸಿದೆ.
ದೇವಸ್ಥಾನದಲ್ಲಿ ಯಾರೂ ಇಲ್ಲದ ಸಮಯದಲ್ಲಿ ಗರ್ಭಗುಡಿಯ ಬಾಗಿಲ ಬೀಗ ಮುರಿದು ಒಳಗೆ ನುಗ್ಗಿದ ಕಳ್ಳರು ದೇವಿಯ ಮೈ ಮೇಲಿದ್ದ ಚಿನ್ನ ಹಾಗೂ ಬೆಳ್ಳಿಯ ಆಭರಣಗಳನ್ನು ದೋಚಿದ್ದಾರೆ ಎನ್ನಲಾಗಿದೆ. ಈ ಕುರಿತು ಹಂಸಬಾವಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net