ದೇವಸ್ಥಾನ, ಭತ್ತದ ಗದ್ದೆಗಳು ಜಲಾವೃತ

Hadagali Flood
ಹೂವಿನಹಡಗಲಿ ತಾಲೂಕಿನ ಶ್ರೀಕ್ಷೇತ್ರ ಮದಲಗಟ್ಟಿ ಆಂಜನೇಯ ಸ್ವಾಮಿ ದೇವಸ್ಥಾನ ಜಲಾವೃತವಾಗಿರುವುದು.
Published on

ಹೂವಿನಹಡಗಲಿ: ಮಲೆನಾಡು ಹಾಗೂ ಅರೆಮಲೆನಾಡನಲ್ಲಿ ಭಾರಿ ಮಳೆಯಾಗುತ್ತಿರುವುದರಿಂದ ತುಂಗಭದ್ರಾ ನದಿಗೆ ಹೆಚ್ಚಿನ ಪ್ರಮಾಣದ ನೀರು ಹರಿದು ಬರುತ್ತಿದ್ದು, ತಾಲೂಕಿನ ಮಕರಬ್ಬಿ ಗ್ರಾಮದಲ್ಲಿ 30 ಎಕರೆಗೂ ಹೆಚ್ಚು ಭತ್ತದ ಗದ್ದೆಗಳು ಜಲಾವೃತಗೊಂಡಿವೆ.

ರಾಜವಾಳ ಬಳಿ ಇರುವ ಸಿಂಗಟಾಲೂರು ಬ್ಯಾರೇಜ್‌ನಲ್ಲಿ ಶನಿವಾರ 1.41 ಲಕ್ಷ ಕ್ಯೂಸೆಕ್ ಒಳಹರಿವು ದಾಖಲಾಗಿದ್ದು, ಅಷ್ಟೇ ಪ್ರಮಾಣದ ನೀರನ್ನು 15 ಗೇಟ್‌ಗಳನ್ನು ತೆರೆದು ನದಿಗೆ ಬಿಡಲಾಗಿದೆ.

ಬ್ಯಾರೇಜ್ ಒತ್ತಡವನ್ನು ಸಮಾನಾಂತರವಾಗಿ ಕಾಯ್ದುಕೊಳ್ಳಲು ದಿನದ 24 ಗಂಟೆಯೂ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ ಎಂದು ಯೋಜನೆಯ ಎಇಇ ರಾಘವೇಂದ್ರ ತಿಳಿಸಿದರು.

ಶ್ರೀ ಕ್ಷೇತ್ರ ಮದಲಗಟ್ಟಿ ಆಂಜನೇಯ ದೇವಸ್ಥಾನ ಮುಂಭಾಗದ ಕೊನೆಯ ಮೆಟ್ಟಿಲುಗಳವರೆಗೆ ನದಿ ನೀರು ತಲುಪಿದೆ. ದೇವಸ್ಥಾನದ ಮುಂಭಾಗದಲ್ಲಿ ಹಗ್ಗ ಕಟ್ಟಿ ನದಿಗೆ ಯಾರೂ ಇಳಿಯದಂತೆ ದೇವಸ್ಥಾನ ಸಮಿತಿಯಿಂದ ಜಾಗೃತಿ ಮೂಡಿಸಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net