

ಮಡಿಕೇರಿ:
ನಗರದ ಶಕ್ತಿ ದೇವತೆಗಳಲ್ಲಿ ಒಂದಾದ ಶ್ರೀ ಕೋಟೆ ಮಾರಿಯಮ್ಮ ದೇವಾಲಯದಲ್ಲಿ ಕಳುವು ಪ್ರಕರಣಕ್ಕೆ ಸಂಬAಧಿಸಿದAತೆ ಅಸ್ಸಾಂ ಮೂಲದ ಇಬ್ಬರು ಆರೋಪಿಗಳನ್ನು ಗುರುವಾರ (ಆ.22) ಪೊಲೀಸರು ಬಂಧಿಸಿದ್ದಾರೆ. ಕಾಂತೂರು-ಮೂರ್ನಾಡು ಗ್ರಾಮದ ತೆಕ್ಕಡ ಪ್ರಸನ್ನ ಎಂಬವರ ತೋಟದ ಲೈನ್ ಮನೆಯಲ್ಲಿ ವಾಸವಿರುವ ಅಸ್ಸಾಂನ ಅಲಾಬ್ ಅಲಿ (27)ಮತ್ತು ಕಳುವು ಉದ್ದೇಶದಿಂದಲೇ ಅಸ್ಸಾಂನಿAದ ಬಂದಿದ್ದ ಮೀರ್ ಹುಸೇನ್ ಆಲಿಯಾಸ್ ನೂರ್ ಹುಸೇನ್ (36) ಬಂಧಿತ ಆರೋಪಿಗಳು. ಬ0ಧಿತರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಕಳವು ಮಾಡಿದ್ದ 3 ಗ್ರಾಂ ಚಿನ್ನದ ಮಾಂಗಲ್ಯ, 111 ಗ್ರಾಂ ಬೆಳ್ಳಿಯ ಕಿರೀಟ, 59 ಗ್ರಾಂ ಬೆಳ್ಳಿಯ ದೃಷ್ಟಿ ಬೊಟ್ಟು ಆಭರಣಗಳು ಮತ್ತು 95,501 ರೂ. ನಗದನ್ನು ಆರೋಪಿಗಳಿಂದ ವಶಪಡಿಸಿಕೊಳ್ಳಲಾಗಿದೆ.
ಮಡಿಕೇರಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಶ್ರೀ ಕೋಟೆ ಮಾರಿಯಮ್ಮ ದೇವಾಲಯದಲ್ಲಿ ಆ.16ರ ರಾತ್ರಿ ದೇವಸ್ಥಾನದ ಮುಖ್ಯ ದ್ವಾರದ ಬೀಗ ಮುರಿದು 2 ಕಾಣಿಕೆ ಡಬ್ಬಿಗಳನ್ನು ಒಡೆದು ಅಂದಾಜು 2.50 ಲಕ್ಷ ರೂ., ಮತ್ತು ದೇವಿಯ ಮೂರ್ತಿಗೆ ಅಳವಡಿಸಿದ್ದ ಸುಮಾರು ರೂ. 1.16 ಲಕ್ಷ ಬೆಲೆಬಾಳುವ ಚಿನ್ನ ಹಾಗೂ ಬೆಳ್ಳಿಯ ಆಭರಣಗಳನ್ನು ಕಳ್ಳತನ ಮಾಡಿರುವ ಬಗ್ಗೆ ಮಡಿಕೇರಿ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು.
ಈ ಬೆನ್ನಲ್ಲೇ ಸ್ಥಳಕ್ಕೆ ಭೇಟಿ ನೀಡಿದ್ದ ಎಸ್‌ಪಿ ಕೆ.ರಾಮರಾಜನ್, ಹೆಚ್ಚುವರಿ ಎಸ್‌ಪಿ ಸುಂದರ್ ರಾಜ್, ಮಡಿಕೇರಿ ಡಿವೈಎಸ್‌ಪಿ ಮಹೇಶ್ ಕುಮಾರ್ ಸೇರಿದಂತೆ ಅಧಿಕಾರಿಗಳು ಮತ್ತು ಸಿಬ್ಬಂದಿ ಕೃತ್ಯಕ್ಕೆ ಸಂಬAಧಿಸಿದ ಮಾಹಿತಿ ಹಾಗೂ ಸಾಕ್ಷ್ಯಾಧಾರಗಳನ್ನು ಕಲೆ ಹಾಕಿದ್ದರು. ಆರೋಪಿಗಳನ್ನು ಪತ್ತೆಹಚ್ಚಲು ಡಿವೈಎಸ್‌ಪಿ ಮಹೇಶ್ ಕುಮಾರ್, ಸಿ.ಪಿ.ಐ. ರಾಜು ಪಿ.ಕೆ., ಪಿಎಸ್‌ಐ ಲೋಕೇಶ್, ಉಪವಿಭಾಗ ಮಟ್ಟದ ಅಪರಾಧ ಪತ್ತೆ ಸಿಬ್ಬಂದಿಗಳು, ಡಿಸಿಆರ್‌ಬಿ ಮತ್ತು ತಾಂತ್ರಿಕ ಸಿಬ್ಬಂದಿಯ ವಿಶೇಷ ತಂಡವನ್ನು ರಚಿಸಲಾಗಿತ್ತು.
ಈ ಪ್ರಕರಣದ ಆರೋಪಿಗಳನ್ನು ಪತ್ತೆಹಚ್ಚಿ ಕಳವು ಮಾಲನ್ನು ವಶಪಡಿಸಿಕೊಳ್ಳುವಲ್ಲಿ ಉತ್ತಮವಾಗಿ ಕಾರ್ಯನಿರ್ವಹಿಸಿದ ಅಧಿಕಾರಿ ಹಾಗೂ ಸಿಬ್ಬಂದಿಯನ್ನು ಎಸ್‌ಪಿ ಕೆ. ರಾಮರಾಜನ್ ಶ್ಲಾಘಿಸಿದಾರೆ. ಸಾರ್ವಜನಿಕ ಸ್ಥಳಗಳಲ್ಲಿ ಹಾಗೂ ಮನೆಯ ಸುತ್ತ-ಮುತ್ತಲಿನ ಪ್ರದೇಶಗಳಲ್ಲಿ ಯಾವುದೇ ಅನುಮಾನಸ್ಪದ ವ್ಯಕ್ತಿಗಳು ಕಂಡುಬAದಲ್ಲಿ ಸ್ಥಳೀಯ ಪೊಲೀಸ್ ಠಾಣೆ , ತುರ್ತು ಸಹಾಯವಾಣಿ 112ಕ್ಕೆ ಕರೆ ಮಾಡಿ ಮಾಹಿತಿ ನೀಡುವಂತೆ ಮತ್ತು ಕೆ.ಎಸ್.ಪಿ ತಂತ್ರಾಶದ ಮೂಲಕ ಮಾಹಿತಿ ನೀಡಿ ಸಹಕರಿಸುವಂತೆ ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ.