ದೇವಸ್ಥಾನ, ದೈವಸ್ಥಾನ, ಮನೆ ಕಳವು ಇಬ್ಬರು ಕುಖ್ಯಾತ ಆರೋಪಿಗಳ ಬಂಧನ

20211209_133415-01
Published on

ಮಂಗಳೂರು: ಮಂಗಳೂರು ನಗರ ಪೊಲೀಸ್ ಕಮಿಷನರೆಟ್ ವ್ಯಾಪ್ತಿಯಲ್ಲಿ ದೇವಸ್ಥಾನ, ದೈವಸ್ಥಾನ ಹಾಗು ಮನೆ ಕಳವು ಕೃತ್ಯದಲ್ಲಿ ತೊಡಗಿಸಿಕೊಂಡಿದ್ದ ಇಬ್ಬರು ಕುಖ್ಯಾತ ಕಳ್ಳರನ್ನು ಪೊಲೀಸರು ಬಂಧಿಸಿದ್ದಾರೆ.
ಚಿಕ್ಕಮಗಳೂರಿನ ನಾಗ ನಾಯ್ಕ ಮತ್ತು ದಾವಣಗೆರೆಯ ಮಾರುತಿ ಬಂಧಿತರು.
ಬಂಧಿತರಿಂದ ಚಿನ್ನ, ಬೆಳ್ಳಿಯ ಆಭರಣಗಳು ಸೇರಿದಂತೆ ಒಟ್ಟು 28.40 ಲಕ್ಷ ರೂ. ಮೌಲ್ಯದ ಸೊತ್ತುಗಳನ್ನು ವಶಕ್ಕೆ ಪಡೆಯಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net