ದೇಗುಲದಲ್ಲಿ ವೀರಾಂಜನೇಯಸ್ವಾಮಿಗೆ ಅಭಿಷೇಕ ಮಾಡಿದ ಶ್ರೀಗಳು

000012
Published on

ಚಿಕ್ಕಬಳ್ಳಾಪುರ: ಜಿಲ್ಲಾದ್ಯಂತ ಶ್ರೀರಾಮನವಮಿ ಹಬ್ಬವನ್ನು ಬುಧವಾರ ವಿವಿಧ ಪೂಜಾ ಕಾರ್ಯಕ್ರಮಗಳೊಂಂದಿಗೆ ಶ್ರದ್ಧಾ ಭಕ್ತಿಯಿಂದ ಆಚರಿಸಲಾಯಿತು.
ಜಿಲ್ಲಾ ಕೇಂದ್ರದಲ್ಲಿನ ಶ್ರೀ ಕೋದಂಡರಾಮಸ್ವಾಮಿ, ಶ್ರೀ ಜೀವಾಂಜನೇಯ ಸ್ವಾಮಿ, ಶ್ರೀ ಪೇಟೆ ಆಂಜನೇಯಸ್ವಾಮಿ, ಇಂದಿರಾನಗರದ ಶ್ರೀ ಅಭÀಯ ಆಂಜನೇಯಸ್ವಾಮಿ ದೇವಾಲಯಗಳಲ್ಲಿ ಬೆಳಗ್ಗೆ ದೇವರಿಗೆ ಕ್ಷೀರಾಭಿಷೇಕ, ಪಂಚಾಮೃತ ಅಭಿಷೇಕ, ಸಹಸ್ರನಾಮಾರ್ಚನೆ ನಡೆಯಿತು. ಬಳಿಕ ವಿಶೇಷ ಹೂವಿನ ಅಲಂಕಾರ ಕೈಗೊಳ್ಳಲಾಯಿತು. ಸಂಜೆ ಉತ್ಸವ ಮೂರ್ತಿಯನ್ನು ಹೂವಿನ ಪಲ್ಲಕ್ಕಿಯಲ್ಲಿರಿಸಿ ನಗರದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ಮಾಡಲಾಯಿತು. ಹಬ್ಬದ ಹಿನ್ನೆಲೆಯಲ್ಲಿ ದೇವಾಲಯಗಳಿಗೆ ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭೇಟಿ ನೀಡಿ, ದೇವರ ದರ್ಶನ ಪಡೆಯುತ್ತಿದ್ದ ದೃಶ್ಯ ಸಾಮಾನ್ಯವಾಗಿತ್ತು.

* ಶ್ರೀಗಳಿಂದ ಅಭಿಷೇಕ
ತಾಲೂಕಿನ ಸೂಲಾಲಪ್ಪ ದಿನ್ನೆಯ ಶ್ರೀ ವೀರಾಂಜನೇಯ ಸ್ವಾಮಿ ದೇವಾಲಯಕ್ಕೆ ಆದಿಚುಂಚನಗಿರಿ ಮಠದ ಪೀಠಾಧ್ಯಕ್ಷ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ ಭೇಟಿ ನೀಡಿದರು. ಶ್ರೀರಾಮ ಹಾಗೂ ವೀರಾಂಜನೇಯಸ್ವಾಮಿಗೆ ಅಭಿಷೇಕ ನೆರವೇರಿಸಿ, ವಿಶೇಷ ಪೂಜೆ ಸಲ್ಲಿಸಿದರು. ಬಳಿಕ ಶ್ರೀರಾಮನವಮಿಯ ಆಚರಣೆ ಬಗ್ಗೆ ಭಕ್ತರಿಗೆ ಆರ್ಶೀವಚನ ನೀಡಿದರು.


*ಸಂಘ ಸಂಸ್ಥೆಗಳಿಂದ ಸೇವೆ
ನಗರದ ಗಂಗಮ್ಮ ಗುಡಿ ರಸ್ತೆಯಲ್ಲಿರುವ ವಾಣಿ ಚಿತ್ರ ಮಂದಿರ ಮುಂಭಾಗ, ಬಾಲಾಜಿ ಚಿತ್ರ ಮಂದಿರ ಹಿಂಭಾಗ, ಜೂನಿಯರ್ ಕಾಲೇಜು, ಚೆನ್ನಯ್ಯ ಉದ್ಯಾನವನ ಬಳಿ, ಕನಕದಾಸರ ಭಜನೆಮನೆ, ದೊಡ್ಡ ಭಜನೆಮನೆ, ಹಳೆ ಬಸ್ ನಿಲ್ದಾಣ ಸೇರಿದಂತೆ ವಿವಿಧೆಡೆ ನಾನಾ ಸಂಘಟನೆಗಳು, ಆಟೋ ಚಾಲಕರ ಸಂಘ ಮತ್ತು ಸ್ವಯಂ ಸೇವಾ ಸಂಸ್ಥೆಗಳಿಂದ ಪಾನಕ, ಮಜ್ಜಿಗೆ, ಹೆಸರುಬೇಳೆ ವಿತರಿಸಲಾಯಿತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net