ದೇವಸ್ಥಾನಗಳು ನೆಮ್ಮದಿಯ ತಾಣ

02Manju4-Web
ಕರಡಿಗುದ್ದಿ ಗ್ರಾಮದ ಬಸವೇಶ್ವರ ದೇವಸ್ಥಾನ ಕಮಿಟಿ ಸದಸ್ಯರಿಗೆ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ 25 ಲಕ್ಷ ರೂ. ಅನುದಾನದ ಚೆಕ್ ವಿತರಿಸಿದರು. ತಾಪಂ ಅಧ್ಯಕ್ಷ ಶಂಕರಗೌಡ ಪಾಟೀಲ, ದೇವಸ್ಥಾನ ಕಮಿಟಿ ಸದಸ್ಯರು ಉಪಸ್ಥಿತರಿದ್ದರು.
Published on

ಬೆಳಗಾವಿ: ಬೆಳಗಾವಿ ಗ್ರಾಮೀಣ ಕ್ಷೇತ್ರದ ಕರಡಿಗುದ್ದಿ ಗ್ರಾಮದ ಬಸವೇಶ್ವರ ದೇವಸ್ಥಾನದ ಅಭಿವೃದ್ಧಿಗಾಗಿ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಶಾಸಕರ ನಿಧಿಯಿಂದ 25 ಲಕ್ಷ ರೂ. ಅನುದಾನವನ್ನು ದೇವಸ್ಥಾನ ಕಮಿಟಿಗೆ ಶನಿವಾರ ಹಸ್ತಾಂತರಿಸಿದರು.

ಬಳಿಕ ಮಾತನಾಡಿದ ಅವರು, ಕ್ಷೇತ್ರದಲ್ಲಿ ಹಲವಾರು ದೇವಸ್ಥಾನಗಳ ಜೀರ್ಣೋದ್ಧಾರ, ದೇವಸ್ಥಾನಗಳ ನಿರ್ಮಾಣಕ್ಕೆ ಆರ್ಥಿಕ ಸಹಾಯ ನೀಡಿದ್ದೇನೆ. ದೇವಸ್ಥಾನಗಳಿಂದ ಗ್ರಾಮದಲ್ಲಿ ನೆಮ್ಮದಿಯ ವಾತಾವರಣ ನಿರ್ಮಾಣವಾಗಲಿದೆ ಎಂದರು. ಕ್ಷೇತ್ರದ ಜನರು ನನ್ನ ಮತ್ತು ಕಾಂಗ್ರೆಸ್ ಮೇಲಿಟ್ಟಿರುವ ವಿಶ್ವಾಸಕ್ಕೆ ಆಭಾರಿಯಾಗಿದ್ದೇನೆ. ವಿಧಾನಸಭೆ ಚುನಾವಣೆಯಂತೆ ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಕ್ಷೇತ್ರದ ಜನರು ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳನ್ನು ಬೆಂಬಲಿಸಿದ್ದಾರೆ ಎಂದರು. ತಾಪಂ ಅಧ್ಯಕ್ಷ ಶಂಕರಗೌಡ ಪಾಟೀಲ, ದೇವಸ್ಥಾನ ಕಮಿಟಿ ಸದಸ್ಯರು, ಗ್ರಾಪಂ ಸದಸ್ಯರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net