ಹೊನ್ನಾವರ- ಟೆಂಪೊ ಪಲ್ಟಿ 10 ಜನರಿಗೆ ಗಾಯ

Tempo accident in Honnavara-Banglore Highay
Published on

ಕಾರವಾರ: ಗೇರುಸೊಪ್ಪ ಹೊನ್ನಾವರ ನಡುವೆ ರಾಷ್ಟ್ರೀಯ ಹೆದ್ದಾರಿ -206 ರಲ್ಲಿ ಟೆಂಪೊ ಪಲ್ಟಿಯಾಗಿ ಮೂವರು ಗಂಭೀರವಾಗಿ ಗಾಯಗೊಂಡ ಘಟನೆ ಬುಧವಾರ ನಡೆದಿದೆ.

ಕೆಕ್ಕಾರ ಸಮೀಪ ಟಯರ್‌ ಸ್ಪೋಟಗೊಂಡು ಅಪಘಾತ ಸಂಭವಿಸಿದೆ. ಒಟ್ಟು 10 ಜನ ಗಾಯಗೊಂಡಿದ್ದು, ಅದರಲ್ಲಿ ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಟೆಂಪೋ ಮದುವೆಯೊಂದಕ್ಕೆ ಜನರನ್ನು ತುಂಬಿಕೊಂಡು ಸಾಗುತ್ತಿತ್ತು ಎನ್ನಲಾಗಿದೆ.

ಗಾಯಾಳುಗಳನ್ನು ಹೊನ್ನಾವರ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಹೊನ್ನಾವರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net