ಯರಿಕೊಪ್ಪ ಗ್ರಾಮದ ಬಳಿ ಟೆಂಪೊ ಹಾಗೂ ಕಾರು ಅಪಘಾತ: ಸ್ಥಳದಲ್ಲೇ ಮೂವರ ಸಾವು

yerrikoppa accident 14 JAN 20
Published on

ಧಾರವಾಡ: ತಾಲೂಕಿನ ಯರಿಕೊಪ್ಪ ಗ್ರಾಮದ ಬಳಿ ಟೆಂಪೊ ಹಾಗೂ ಕಾರು ನಡುವೆ ಅಪಘಾತ ಸಂಭವಿಸಿ ಮೂವರು ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ.

ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದು, ಇಬ್ಬರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ.

ಸ್ಥಳಕ್ಕೆ ಗ್ರಾಮೀಣ ಠಾಣೆ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ. ಮೃತಪಟ್ಟವರ ಮಾಹಿತಿ ಇನ್ನೂ ತಿಳಿದು ಬಂದಿಲ್ಲ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net