ಹೊತ್ತಿ ಉರಿದ ಶಾಲಾ ಮಕ್ಕಳನ್ನು ಸಾಗಿಸುತ್ತಿದ್ದ ಟೆಂಪೋ, ಚಾಲಕನ ಸಮಯ ಪ್ರಜ್ಞೆಯಿಂದ ತಪ್ಪಿದ ಅನಾಹುತ

16bkl1
Published on

 ಭಟ್ಕಳ: ವಿದ್ಯಾರ್ಥಿಗಳನ್ನು ಕರೆದುಕೊಂಡು ಹೋಗುತ್ತಿದ್ದ ಶಮ್್ಸ ಆಂಗ್ಲ ಮಾಧ್ಯಮ ಶಾಲೆಯ ಟೆಂಪೋವೊಂದು ತಾಲೂಕಿನ ವೆಂಕಟಾಪುರದ ಬಳಿ ಹೊತ್ತಿ ಉರಿದ ಪರಿಣಾಮ ವಾಹನ ಸಂಪೂರ್ಣ ಸುಟ್ಟು ಕರಕಲಾಗಿ, ಮಕ್ಕಳು ಅಪಾಯದಿಂದ ಪಾರಾದ ಘಟನೆ ಸೋಮವಾರ ನಡೆದಿದೆ.

ಶಮ್್ಸ ಆಂಗ್ಲ ಮಾಧ್ಯಮ ಶಾಲೆಯ ಟೆಂಪೋವೊಂದು ಸುಮಾರು 12 ಮಕ್ಕಳೊಂದಿಗೆ ವಿದ್ಯಾರ್ಥಿಗಳನ್ನು ಬಿಡಲು ಮಧ್ಯಾಹ್ನ 1:45 ರ ಸುಮಾರಿಗೆ ಶಿರಾಲಿ ಕಡೆಗೆ ಹೋಗುತ್ತಿತ್ತು. ಇಂಜಿನ್ ಬಳಿ ಹೊಗೆ ಬರುತ್ತಿರುವುದನ್ನು ಗಮನಿಸಿದ ಚಾಲಕ, ತಕ್ಷಣವೇ ವಾಹನ ನಿಲ್ಲಿಸಿ ಎಲ್ಲ ಮಕ್ಕಳನ್ನು ಕೆಳಗಿಳಿಸಿ ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಿದ್ದಾರೆ. ಅಗ್ನಿಶಾಮಕ ದಳ ಬರುವ ಮುನ್ನವೇ ಹೊಗೆ ಜ್ವಾಲೆಯಾಗಿ ಪರಿಣಮಿಸಿ ಟೆಂಪೋದ ಮುಂಭಾಗ ಬೆಂಕಿಗೆ ಆಹುತಿಯಾಗಿದೆ.

ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸಿ, ಮತ್ತಷ್ಟು ಹರಡದಂತೆ ತಡೆದಿದ್ದಾರೆ. ಚಾಲಕನ ಕಾರ್ಯಕ್ಕೆ ಸಾರ್ವಜನಿಕ ವಲಯದಲ್ಲಿ ಶ್ಲಾಘನೆ ವ್ಯಕ್ತವಾಗಿದೆ. ಮಾಹಿತಿ ಪಡೆದ ಭಟ್ಕಳ ಗ್ರಾಮಾಂತರ ಪೊಲೀಸ್ ಇನ್ಸ್​ಪೆಕ್ಟರ್ ಚಂದನ್ ಗೋಪಾಲ್ ಮತ್ತು ಅವರ ತಂಡ ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net