ತಾತ್ಕಾಲಿಕ ಆಕಷರ್ಣೆಗೆ ಮಾರುಹೋಗದಿರಿ

27-feb-hdl-01
ಹೂವಿನಹಡಗಲಿಯ ಜಿಬಿಆರ್ ಕಾಲೇಜಿನಲ್ಲಿ ಹಮ್ಮಿಕೊಂಡಿದ್ದ ವಿವಿ ಮಟ್ಟದ ಅಂತರ್ ಕಾಲೇಜು ಪುರುಷ ಮತ್ತು ಮಹಿಳಾ ಬಾಲ್‌ಬ್ಯಾಡ್ಮಿಂಟನ್ ಪಂದ್ಯಾವಳಿಗೆ ಶಾಸಕ ಕೃಷ್ಣನಾಯ್ಕ ಚಾಲನೆ ನೀಡಿದರು. ಕಾಲೇಜು ಆಡಳಿತ ಮಂಡಳಿ ಅಧ್ಯಕ್ಷ ಸಿ.ಮೋಹನ ರೆಡ್ಡಿ ಇತರರಿದ್ದರು.
Published on

ಹೂವಿನಹಡಗಲಿ: ವಿದ್ಯಾರ್ಥಿಗಳು ಪಠ್ಯದ ಜತೆ ಕ್ರೀಡೆಯಲ್ಲಿ ತೊಡಗಿಸಿಕೊಳ್ಳುವ ಮೂಲಕ ಸರ್ವತೋಮುಖ ಅಭಿವೃದ್ಧಿ ಹೊಂದಬೇಕು ಎಂದು ಶಾಸಕ ಕೃಷ್ಣನಾಯ್ಕ ಹೇಳಿದರು.

ಪಟ್ಟಣದ ಜಿಬಿಆರ್ ಕಾಲೇಜಿನಲ್ಲಿ ಶ್ರೀಕೃಷ್ಣದೇವರಾಯ ವಿವಿ ಸಹಯೋಗದಲ್ಲಿ ಗುರುವಾರ ಹಮ್ಮಿಕೊಂಡಿದ್ದ ವಿವಿ ಮಟ್ಟದ ಅಂತರ್ ಕಾಲೇಜಿನ ಪುರುಷ ಮತ್ತು ಮಹಿಳಾ ಬಾಲ್‌ಬ್ಯಾಡ್ಮಿಂಟನ್ ಪಂದ್ಯಾವಳಿ ಹಾಗೂ ವಿವಿ ತಂಡದ ಆಯ್ಕೆ ಪ್ರಕ್ರಿಯೆ ಕಾರ್ಯಕ್ರಮದಲ್ಲಿ ಮಾತನಾಡಿದರು.

ಮಾನಸಿಕ ಆರೋಗ್ಯದ ಜತೆ ದೈಹಿಕ ಆರೋಗ್ಯವೂ ಮುಖ್ಯ. ನಿರಂತರವಾಗಿ ಕ್ರೀಡೆಗಳಲ್ಲಿ ಭಾಗವಹಿಸುವುದರಿಂದ ದೈಹಿಕ ಸದೃಢತೆ ಹೆಚ್ಚುತ್ತದೆ. ಗ್ರಾಮೀಣ ವಿದ್ಯಾರ್ಥಿಗಳಿಗಾಗಿ ಇರುವ ಸೌಲಭ್ಯಗಳನ್ನು ಸಮರ್ಪಕವಾಗಿ ಬಳಸಿಕೊಳ್ಳಿ. ಕ್ರೀಡೆಯಿಂದ ಹೊಂದಾಣಿಕೆ, ಇಚ್ಛಾಶಕ್ತಿ, ಏಕಾಗ್ರತೆ ಮತ್ತು ಸ್ಪರ್ಧಾ ಮನೋಭಾವ ಬೆಳೆಯುತ್ತದೆ. ಯುವಕರು ತಾತ್ಕಾಲಿಕ ಆಕಷರ್ಣೆಗೆ ಮಾರುಹೋಗದೆ ಸಾಧನೆಗೆ ಶ್ರಮಿಸಬೇಕು. ವಿದ್ಯಾರ್ಥಿ ಜೀವನದಲ್ಲಿ ಗೊಂದಲಕ್ಕೆ ಒಳಗಾಗಬಾರದು ಎಂದು ಹೇಳಿದರು.

ಪ್ರಾಚಾರ್ಯ ಎಸ್.ಎಸ್.ಪಾಟೀಲ ಮಾತನಾಡಿ, ಗ್ರಾಮೀಣ ವಿದ್ಯಾರ್ಥಿಗಳಲ್ಲಿ ಸಾಕಷ್ಟು ದೈಹಿಕ ಶಕ್ತಿ ಇದ್ದರೂ ಸೂಕ್ತ ಮಾರ್ಗದರ್ಶನದ ಕೊರತೆಯಿಂದ ಮುಂದೆ ಸಾಗಲು ಆಗುತ್ತಿಲ್ಲ. ಕಳೆದ 20 ವರ್ಷಗಳಿಂದ ವಿವಿ ಮಟ್ಟದಲ್ಲಿ ನಮ್ಮ ಕಾಲೇಜಿನ ವಿದ್ಯಾರ್ಥಿಗಳು ಸಾಧನೆ ಮಾಡಿದ್ದಾರೆ. ಗ್ರಾಮೀಣ ಮಕ್ಕಳ ಸರ್ವತೋಮುಖ ಅಭಿವೃದ್ಧಿಗೆ ಇಂಥ ಕಾರ್ಯಕ್ರಮಗಳು ಸಹಕಾರಿಯಾಗಿವೆ ಎಂದರು.

ಕಾಲೇಜು ಆಡಳಿತ ಮಂಡಳಿ ಅಧ್ಯಕ್ಷ ಸಿ.ಮೋಹನ ರೆಡ್ಡಿ, ಸದಸ್ಯರಾದ ಕೆ.ಎಂ.ಉದಾಸಿ, ಎಂ.ಮಲ್ಲಿಕಾರ್ಜುನ, ಸೊಪ್ಪಿನ ಪ್ರಕಾಶ, ಪಿಯು ಕಾಲೇಜಿನ ಪ್ರಾಚಾರ್ಯ ಎನ್.ಅಮರೇಗೌಡ ಪಾಟೀಲ್, ದೈಹಿಕ ಶಿಕ್ಷಣ ನಿರ್ದೇಶಕ ಬಡೇಸಾಬ ನಾಯಕ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net