

ಧಾರವಾಡ: ರಾಜ್ಯ ರಸ್ತೆ ಸಾರಿಗೆ ನೌಕರರ ಒಕ್ಕೂಟ ಏ. 7ರಿಂದ ಮುಷ್ಕರಕ್ಕೆ ಕರೆ ನೀಡಿದ್ದಾರೆ. ಈ ಕಾರಣದಿಂದ ಖಾಸಗಿ ಸೇವಾ, ಶಾಲಾ ವಾಹನಗಳು, ಮ್ಯಾಕ್ಸಿಕ್ಯಾಬ್, ಪ್ರವಾಸಿ ವಾಹನಗಳು, ಒಪ್ಪಂದ ವಾಹನಗಳಿಗೆ ಮೋಟಾರು ವಾಹನ ಕಾಯ್ದೆ 1988 ಸೆಕ್ಷನ್ 87/1/ಸಿ ಅಡಿ ತಾತ್ಕಾಲಿಕ ರಹದಾರಿ ನೀಡಿ ಜನರಿಗೆ ಸಾರಿಗೆ ವ್ಯವಸ್ಥೆಯಲ್ಲಿ ತೊಂದರೆಯಾಗದಂತೆ ಕ್ರಮ ಜರುಗಿಸಲಾಗುವುದು ಎಂದು ಪ್ರಾದೇಶಿಕ ಸಾರಿಗೆ ಪ್ರಾಧಿಕಾರದ ಅಧ್ಯಕ್ಷ, ಜಿಲ್ಲಾಧಿಕಾರಿ ನಿತೇಶ ಪಾಟೀಲ ಹೇಳಿದರು.
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶನಿವಾರ ಹಮ್ಮಿಕೊಂಡಿದ್ದ ಪ್ರಾದೇಶಿಕ ಸಾರಿಗೆ ಪ್ರಾಧಿಕಾರ ಹಾಗೂ ಜಿಲ್ಲಾ ರಸ್ತೆ ಸುರಕ್ಷತಾ ಸಮಿತಿಗಳ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಜನರಿಗೆ ಸಾರಿಗೆ ವ್ಯವಸ್ಥೆಯಲ್ಲಿ ವ್ಯತ್ಯಯ ಆಗದಂತೆ ಕ್ರಮ ವಹಿಸಲು ಸರ್ಕಾರ ಸಿದಟಛಿತೆ ನಡೆಸಿದೆ. ಜಿಲ್ಲೆಯಲ್ಲಿ ಲಭ್ಯವಿರುವ ಶಾಲಾ ವಾಹನಗಳು, ಖಾಸಗಿ ಬಸ್ಗಳು, ಮ್ಯಾಕ್ಸಿಕ್ಯಾಬ್ಗಳ ಸಂಖ್ಯೆ ಮತ್ತು ಸಾರ್ವಜನಿಕ ಬಸ್ ಸಂಚರಿಸುವ ಮಾರ್ಗಗಳ ವಿವರ ಸಂಗ್ರಹಿಸಿ ಅಗತ್ಯ ಏರ್ಪಾಡುಗಳನ್ನು ಕೈಗೊಳ್ಳಬೇಕು. ಮುಷ್ಕರದ ಅವಧಿಯಲ್ಲಿ ತಾತ್ಕಾಲಿಕ ಬಸ್ಗಳ ಸಂಚಾರಕ್ಕೆ ಪರ್ಯಾಯ ವ್ಯವಸ್ಥೆ ಕುರಿತು ಸೂಕ್ತ ಕ್ರಮ ವಹಿಸಬೇಕು. ಇದಕ್ಕೆ ಪ್ರಾದೇಶಿಕ ಸಾರಿಗೆ ಇಲಾಖೆ, ಪೊಲೀಸ್ ಇಲಾಖೆ ಅಧಿಕಾರಿಗಳೊಂದಿಗೆ ಸಮನ್ವಯ ಸಾಧಿಸಿ ನೀಲಿನಕ್ಷೆ ಸಿದಟಛಿಪಡಿಸಲು ಸೂಚಿಸಿದರು.
ಹು-ಧಾ ಪೊಲೀಸ್ ಆಯುಕ್ತ ಲಾಭೂರಾಮ ಮಾತನಾಡಿ, ಹು-ಧಾ ಬೈಪಾಸ್ ರಸ್ತೆಯಲ್ಲಿ ಗುತ್ತಿಗೆದಾರರು ಒಪ್ಪಿಕೊಂಡಂತೆ 1,200 ರಸ್ತೆ ವಿಭಜಕಗಳನ್ನು ಅಳವಡಿಸಬೇಕು. ಈ ಸಾಮಗ್ರಿಗಳು ಉತ್ತಮ ಗುಣಮಟ್ಟದ್ದಾಗಿರಬೇಕು. ಭಾರಿ ವಾಹನಗಳ ಸಂಚಾರ, ವಾಹನ ದಟ್ಟಣೆ ಮೊದಲಾದ ಅಂಶಗಳನ್ನು ಗಮನದಲ್ಲಿಟ್ಟುಕೊಂಡು ಸುರಕ್ಷತಾ ಕ್ರಮ ಜಾರಿಗೊಳಿಸಬೇಕು ಎಂದು ಸೂಚಿಸಿದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪಿ. ಕೃಷ್ಣಕಾಂತ, ಹು-ಧಾ ಪೂರ್ವ ಪ್ರಾದೇಶಿಕ ಸಾರಿಗೆ ಅಧಿಕಾರಿ ಅಪ್ಪಯ್ಯಸ್ವಾಮಿ ನಾಲ್ವತ್ತವಾಡಮಠ, ಪಶ್ಚಿಮ ಆರ್ಟಿಒ ಬಿ. ಶಂಕ್ರಪ್ಪ, ರಾಷ್ಟ್ರೀಯ ಹೆದ್ದಾರಿ ವಿಭಾಗದ ಕಾರ್ಯನಿರ್ವಾಹಕ ಇಂಜಿನಿಯರ್ ಆರ್.ಕೆ. ಮಠದ, ವಾಕರಸಾಸಂ ವಿಭಾಗೀಯ ನಿಯಂತ್ರಕ ವಿವೇಕಾನಂದ ವಿಶ್ವಜ್ಞ, ಎಚ್.ಆರ್. ರಾಮನಗೌಡರ, ಬಸಲಿಂಗಪ್ಪ ಬೀಡಿ, ಇತರರು ಇದ್ದರು.
EndFragment