

ಮಂಡ್ಯ: ಭಾರಿ ಮಳೆ ಹಿನ್ನೆಲೆಯಲ್ಲಿ ಮಂಡ್ಯದ ಕೆಲವು ಪ್ರದೇಶಗಳಲ್ಲಿ ಪ್ರವಾಹ ಪರಿಸ್ಥಿತಿ ಎದುರಾಗಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ. ಈ ಮಧ್ಯೆ ಬೆಂಗಳೂರು-ಮೈಸೂರು ನಡುವಿನ ಹತ್ತು ರೈಲುಗಳ ಸಂಚಾರ ಸ್ಥಗಿತಗೊಂಡಿದ್ದು, ಕೆಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯವಾಗಿದೆ.
ಇಂದು ಬೆಳಗ್ಗೆಯಿಂದ ಬೆಂಗಳೂರು-ಮೈಸೂರು ನಡುವಿನ ಹತ್ತು ಸುಮಾರು ಹತ್ತು ರೈಲುಗಳ ಸಂಚಾರ ಸ್ಥಗಿತಗೊಂಡಿದೆ. ಬಹುತೇಕ ಮೆಮೂ ಹಾಗೂ ಪ್ಯಾಸೆಂಜರ್ ರೈಲುಗಳ ಸಂಚಾರ ಸ್ಥಗಿತಗೊಂಡಿದ್ದು, ಉಳಿದಂತೆ ಕೆಲವು ರೈಲುಗಳ ಸಂಚಾರ ಸಮಯದಲ್ಲಿ ವ್ಯತ್ಯಾಸವಾಗಿದೆ.
ಮದ್ದೂರು ಹಾಗೂ ಹನಕೆರೆ ಬಳಿಯ 627ನೇ ಬ್ರಿಡ್ಜ್ನಲ್ಲಿ ಅಪಾಯಕಾರಿಯಾಗಿ ನೀರು ಹರಿಯುತ್ತಿರುವ ಕಾರಣದಿಂದ ರೈಲು ಸಂಚಾರ ಸ್ಥಗಿತಗೊಂಡಿದೆ. ನಾಳೆ ಪರಿಸ್ಥಿತಿ ನೋಡಿಕೊಂಡು ರೈಲು ಸಂಚಾರ ಆರಂಭವಾಗಲಿದೆ. ಈಗಾಗಲೇ ಮಂಡ್ಯ-ಮದ್ದೂರು ರಾಷ್ಟ್ರೀಯ ಹೆದ್ದಾರಿಯಲ್ಲೂ ಸಂಚಾರ ಬಂದ್ ಆಗಿದ್ದು, ಬದಲಿ ಮಾರ್ಗದ ಮೂಲಕ ವಾಹನಗಳು ಸಂಚರಿಸುತ್ತಿವೆ.