ಟೆನಿಸ್ ಬಾಲ್ ಕ್ರಿಕೆಟ್ ಪಂದ್ಯಾವಳಿ

RANAJI CRICKET
Published on

ಸೋಮವಾರಪೇಟೆ: ಯಡೂರು ಗ್ರಾಮದ ವೈಸಿಸಿ ಕ್ರಿಕೆಟ್ ಕ್ಲಬ್ ಆಶ್ರಯದಲ್ಲಿ ಮಾ.23 ಮತ್ತು 24ರಂದು ಯಡೂರು ಬಿಟಿಸಿಜಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮೈದಾನದಲ್ಲಿ 24ನೇ ವರ್ಷದ ಮುಕ್ತ ಟೆನಿಸ್ ಬಾಲ್ ಕ್ರಿಕೆಟ್ ಪಂದ್ಯಾವಳಿ ಆಯೋಜಿಸಲಾಗಿದೆ.

23ರಂದು ಬೆಳಗ್ಗೆ 9.30ಕ್ಕೆ ಕ್ರೀಡಾಕೂಟವನ್ನು ಯಡೂರು ಗ್ರಾಮಾಭಿವೃದ್ಧಿ ಸಮಿತಿ ಅಧ್ಯಕ್ಷ ಕೆ.ಪಿ.ಭಾನುಪ್ರಕಾಶ್ ಉದ್ಘಾಟಿಸುವರು. ಪ್ರಾಂಶುಪಾಲರಾದ ಪ್ರೊ. ಧನಲಕ್ಷ್ಮೀ, ಗ್ರಾಮ ಪಂಚಾಯಿತಿ ಸದಸ್ಯೆ ಲಲಿತಾ ರಾಮಣ್ಣ, ಉಪಾಧ್ಯಕ್ಷೆ ರೇಣುಕಾ ವೆಂಕಟೇಶ್ ಭಾಗವಹಿಸಲಿದ್ದಾರೆ. 24ರಂದು ಸಂಜೆ 5 ಗಂಟೆಗೆ ಸಮಾರೋಪ ಸಮಾರಂಭ ನಡೆಯಲಿದ್ದು, ಗ್ರಾಪಂ ಸದಸ್ಯ ವೈ.ಎಸ್.ರಘು, ಚೌಡ್ಲು ವಿಎಸ್‌ಎಸ್‌ಎನ್ ಉಪಾಧ್ಯಕ್ಷ ವೈ.ಎಂ.ನಾಗರಾಜು, ನಿರ್ದೇಶಕ ದಳವಾಯಿ ರಾಜು, ಉದ್ಯಮಿಗಳಾದ ಹರಪಳ್ಳಿ ರವೀಂದ್ರ, ಅರುಣ್ ಕಾಳಪ್ಪ, ಗಿರೀಶ್ ಮಲ್ಲಪ್ಪ, ಕೆ.ಟಿ.ಸತೀಶ್, ಉದಯ್ ಪಾಲ್ಗೊಳ್ಳಲಿದ್ದಾರೆ ಎಂದು ಕ್ಲಬ್ ಅಧ್ಯಕ್ಷ ಸುರೇಶ್ ತಿಳಿಸಿದ್ದಾರೆ.

ವಿಜೇತರಿಗೆ ಪ್ರಥಮ ಬಹುಮಾನ 22 ಸಾವಿರ ರೂ.ನಗದು ಹಾಗೂ ಟ್ರೋಫಿ, ದ್ವಿತೀಯ ಬಹುಮಾನ 15 ಸಾವಿರ ರೂ.ನಗದು ಹಾಗೂ ಟ್ರೋಫಿ ನೀಡಲಾಗುವುದು. ಮಾಹಿತಿಗೆ ಮೊ: 9483915913/ 9632297227 ಸಂಖ್ಯೆ ಸಂಪರ್ಕಿಸಬಹುದು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net