ಎಬಿವಿಪಿ ಕಾರ್ಯಕರ್ತರಿಂದ ಪ್ರತಿಭಟನೆ

030102010
Published on

ಬೆಳಗಾವಿ: ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಸೋಮವಾರ ನಗರದ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ಎಬಿವಿಪಿ) ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಬಳಿಕ ಜಿಲ್ಲಾಧಿಕಾರಿ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದರು.

ರಾಜ್ಯದಲ್ಲಿನ ವಿಶ್ವವಿದ್ಯಾಲಯಗಳು ಪರೀಕ್ಷೆ ನಡೆಸುವ ಬಗ್ಗೆ ಸಮರ್ಪಕವಾಗಿ ವಿದ್ಯಾರ್ಥಿಗಳಿಗೆ ಮಾಹಿತಿ ಸಿಗುತ್ತಿಲ್ಲ. ಸರ್ಕಾರ ಮತ್ತು ವಿವಿಗಳ ನಡುವಿನ ಸಮನ್ವಯತೆ ಕೊರತೆಯಿಂದ ವಿದ್ಯಾರ್ಥಿಗಳು ಪರದಾಡುವಂತಾಗಿದೆ. ಶೀಘ್ರ ಸರ್ಕಾರ ಸಮಸ್ಯೆ ಬಗೆಹರಿಸಬೇಕು. ಇಲ್ಲವಾದರೆ ಉಗ್ರ ಹೋರಾಟ ನಡೆಸಲಾಗುವುದು ಎಂದು ಆಕ್ರೋಶ ವ್ಯಕ್ತಪಡಿಸಿದರು.

ವಿವಿಗಳು ಪಠ್ಯಕ್ರಮ ಬದಲಾವಣೆ ಮಾಡಿದ್ದು, ಇದುವರೆಗೆ ಕನ್ನಡ ಮಾಧ್ಯಮದ ವಿದ್ಯಾರ್ಥಿಗಳ ಕೈಗೆ ಪುಸ್ತಕಗಳು ಸೇರಿಲ್ಲ. ಇದರಿಂದಾಗಿ ವಿದ್ಯಾರ್ಥಿಗಳು ಹಿಂದಿನ ಸೆಮಿಸ್ಟರ್ ಅಧ್ಯಯನ ಮಾಡಬೇಕೋ ಅಥವಾ ಈಗಿನ ಸೆಮಿಸ್ಟರ್ ಅಧ್ಯಯನ ಮಾಡಬೇಕೋ ಎನ್ನುವ ಗೊಂದಲದಲ್ಲಿದ್ದಾರೆ. ಈ ಸಂಬಂಧ ಸರ್ಕಾರ ಸ್ಪಷ್ಟ ನಿರ್ಧಾರ ಹೊರಡಿಸಬೇಕು. ಅಲ್ಲದೇ ವಿವಿಗಳ ಪರೀಕ್ಷೆಯನ್ನು ಯಾವ ಮಾನದಂಡದ ಆಧಾರದ ಮೇಲೆ ನಡೆಸುತ್ತವೆ ಎನ್ನುವುದನ್ನು ಸ್ಪಷ್ಟಪಡಿಸಬೇಕು ಎಂದು ಒತ್ತಾಯಿಸಿದರು.ರೋಹಿತ ಉಮನಾಬಾದಿಮಠ ,
ಕಿರಣ ದುಕಾನದಾರ, ಸಂದೀಪ ದೇಶಪಾಂಡೆ, ವಿದ್ಯಾರ್ಥಿಗಳು, ಕಾರ್ಯರ್ತರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net