ಇಂದು ಟಿಇಟಿ ಪರೀಕ್ಷೆ,ಕೇಂದ್ರಗಳಿಗೆ ಡಿಸಿ ಪರಿಶೀಲನೆ

CTD 5 DCccc
Published on

ಚಿತ್ರದುರ್ಗ: ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆ(ಟಿಇಟಿ)ನ.6ರಂದು ನಡೆಯಲಿದ್ದು,ಜಿಲ್ಲೆಯ 37 ಪರೀಕ್ಷಾ ಕೇಂದ್ರಗಳನ್ನು ಇದಕ್ಕಾಗಿ ಸಜ್ಜುಗೊ ಳಿಸಲಾಗಿದೆ. ಜಿಲ್ಲಾಧಿಕಾರಿ ಜಿಆರ್‌ಜೆ ದಿವ್ಯಾಪ್ರಭು ಅವರು ಶನಿವಾರ ವಿವಿಧ ಪರೀಕ್ಷಾ ಕೇಂದ್ರಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ರು.

ಬೆಳಗ್ಗೆ ಹಾಗೂ ಮಧ್ಯಾಹ್ನ ಪರೀಕ್ಷೆಗಳು ನಡೆಯಲಿವೆ. ನಗರದ ಸಂತ ಜೋಸೆಫರ ಕಾನ್ವೆಂಟ್,ಬಾಲಕರ ಸರ್ಕಾರಿ ಪ.ಪೂ.ಕಾಲೇಜು, ಬಾಲಕಿಯರ ಸರ್ಕಾರಿ ಪ.ಪೂ.ಕಾಲೇಜು ಸೇರಿದಂತೆ ವಿವಿಧ ಪರೀಕ್ಷಾ ಕೇಂದ್ರಗಳಿಗೆ ಭೇಟಿ ನೀಡಿ,ಅಧಿಕಾರಿಗಳಿಗೆ ಅಗತ್ಯ ಸಲಹೆ,ಸೂಚನೆ ನೀಡಿದರು.

ಕೇಂದ್ರಗಳ ಪ್ರವೇಶಕ್ಕೂ ಮುನ್ನ ಅಭ್ಯರ್ಥಿಗಳ ಸಮಗ್ರ ತಪಾಸಣೆಗೆ ಕೈಗೊಂಡಿರುವ ಕ್ರಮಗಳನ್ನು ಪರಿಶೀಲಿಸಿ,ಕಟ್ಟುನಿಟ್ಟಾಗಿ ತಪಾಸಣೆ ನಡೆಸ ಬೇಕು. ಪರೀಕ್ಷೆಯಲ್ಲಿ ಅಕ್ರಮ,ಗೊಂದಲಗಳಾಗ ಬಾರದೆಂದರು. ಕೇಂದ್ರಗಳಲ್ಲಿರುವ ಮೂಲ ಸೌಕರ್ಯ,ಸಿಸಿ ಕ್ಯಾಮರಾ,ಆಸನ ಹಾಗೂ ಬೆಳಕಿನ ವ್ಯವಸ್ಥೆ ಗಮನಿಸಿದರು. ಡಿಡಿಪಿಐ ರವಿಶಂಕರ್‌ರೆಡ್ಡಿ,ಪರೀಕ್ಷೆ ನೋಡಲ್ ಅಧಿಕಾರಿ ತಿಪ್ಪೇಸ್ವಾಮಿ,ಪಿಯು ಡಿಡಿ ರಾಜು ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net