ಇಂದು TET ರಿಸಲ್ಟ್​: ಸಚಿವರಿಂದ ಸಂಜೆ 5.30ಕ್ಕೆ ಪಟ್ಟಿ ಬಿಡುಗಡೆ

bc nagesh
Published on

ಬೆಂಗಳೂರು: ರಾಜ್ಯದ ಪ್ರಾಥಮಿಕ ಶಾಲೆಯಲ್ಲಿ 6ರಿಂದ 8ನೇ ತರಗತಿ ಬೋಧನೆಗೆ 15 ಸಾವಿರ ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿಗೆ ಸಂಬಂಧಿಸಿದ ತಾತ್ಕಾಲಿಕ ಆಯ್ಕೆ ಪಟ್ಟಿ ಶುಕ್ರವಾರ ಪ್ರಕಟವಾಗಲಿದೆ.

1:1 ಅನುಪಾತದ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಬಿ.ಸಿ.ನಾಗೇಶ್​ ಸಂಜೆ 5.30ಕ್ಕೆ ಕೆ.ಆರ್​.ವೃತ್ತದಲ್ಲಿರುವ ಸಮಗ್ರ ಶಿಕ್ಷಣ ಕರ್ನಾಟಕ ಕಚೇರಿಯಲ್ಲಿ ಬಿಡುಗಡೆ ಮಾಡಲಿದ್ದಾರೆ. ಈ ಪಟ್ಟಿಗೆ ಆಕ್ಷೇಪಣೆ ಸ್ವೀಕರಿಸಿದ ಬಳಿಕ ಅಂತಿಮ ಆಯ್ಕೆಪಟ್ಟಿ ಪ್ರಕಟಿಸಿ, ನಂತರ ಅಂತಿಮಗೊಂಡ ಶಿಕ್ಷಕರ ಸ್ಥಳ ನಿಯುಕ್ತಿಗೆ ಅಧಿಕಾರಿಗಳು ಕ್ರಮ ವಹಿಸಲಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net