ಕಲಬುರಗಿಗೆ ಜವಳಿ ಕಚೇರಿ ಸ್ಥಳಾಂತರ ಸಲ್ಲ

ಬಳ್ಳಾರಿ ಡಿಸಿ ಕಚೇರಿ ಆವರಣದಲ್ಲಿ ಕೈಮಗ್ಗ ಮತ್ತು ಜವಳಿ ಇಲಾಖೆಯ ಜಂಟಿ ನಿರ್ದೇಶಕರ ಕಚೇರಿ ಸ್ಥಳಾಂತರ ವಿರೋಧಿಸಿ ಬಿಡಿಸಿಸಿಯಿಂದ ಪ್ರತಿಭಟನೆ ನಡೆಸಲಾಯಿತು. ಸಂಸ್ಥೆ ಅಧ್ಯಕ್ಷ ಯಶವಂತರಾಜ ನಾಗಿರೆಡ್ಡಿ, ಮಾಜಿ ಅಧ್ಯಕ್ಷ ಬಿ.ಮಹಾರುದ್ರಗೌಡ, ಉಪಾಧ್ಯಕ್ಷ ಎಸ್.ದೊಡ್ಡನಗೌಡ, ಕಾರ್ಯದರ್ಶಿ ಕೆ.ಸಿ.ಸುರೇಶಬಾಬು, ಜಂಟಿ ಕಾರ್ಯದರ್ಶಿಗಳಾದ ಡಾ.ಮರ್ಚೇಡ್ ಮಲ್ಲಿಕಾರ್ಜುನಗೌಡ, ವಿ.ರಾಮಚಂದ್ರ, ಸಾಮಾಜಿಕ ಹೋರಾಟಗಾರ ಸಿರಿಗೇರಿ ಪನ್ನರಾಜ್ ಇತರರಿದ್ದರು.

Published on

ಬಳ್ಳಾರಿ: ಜಿಲ್ಲೆಯ ಕೈಮಗ್ಗ ಮತ್ತು ಜವಳಿ ಇಲಾಖೆ ಜಂಟಿ ನಿರ್ದೇಶಕರ ಕಚೇರಿಯನ್ನು ಕಲಬುರಗಿಗೆ ಸ್ಥಳಾಂತರಿಸುವ ಪ್ರಯತ್ನ ಕೈಬಿಡಲು ಒತ್ತಾಯಿಸಿ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆ ನಗರದ ಡಿಸಿ ಕಚೇರಿ ಆವರಣದಲ್ಲಿ ಬುಧವಾರ ಪ್ರತಿಭಟನೆ ನಡೆಸಿತು.

ಬಿಡಿಸಿಸಿ ಅಧ್ಯಕ್ಷ ಯಶವಂತರಾಜ್ ನಾಗಿರೆಡ್ಡಿ ಮಾತನಾಡಿ, ಜವಳಿ ಮತ್ತು ಕೈಮಗ್ಗ ಜಂಟಿ ನಿರ್ದೇಶಕರ ಕಚೇರಿಯನ್ನು ಕಲಬುರಗಿಗೆ ಸ್ಥಳಾಂತರ ಮಾಡುವುದರಿಂದ ಆಡಳಿತಾತ್ಮಕ ಹಾಗೂ ತಾಂತ್ರಿಕ ಸಮಸ್ಯೆಗಳಾಗುತ್ತವೆ. ಬಳ್ಳಾರಿಯ ರೆಡಿಮೇಡ್ ಗಾರ್ಮೆಂಟ್ಸ್ ಉದ್ಯಮ ಉತ್ಸಾಹ ಕಳೆದುಕೊಳ್ಳಲಿದೆ. ಜಿಲ್ಲಾ ಅಭಿವೃದ್ಧಿ, ಉದ್ಯಮಿ, ಕಾರ್ಮಿಕರ ಮತ್ತು ಹೂಡಿಕೆದಾರರ ಭವಿಷ್ಯ ಮಸುಕಾಗಲಿದೆ. ಗಾರ್ಮೆಂಟ್ ಉದ್ಯಮಕ್ಕೆ ಪೂರಕವಾದ ಯಾವುದೇ ಕೈಗಾರಿಕಾ ಘಟಕಗಳು ಮತ್ತು ರೆಡಿಮೇಡ್ ಗಾರ್ಮೆಂಟ್ ಇಲ್ಲದಿರುವ ಕಾರಣ ಈ ಕಚೇರಿಯನ್ನು ಬಳ್ಳಾರಿಯಲ್ಲೇ ಮುಂದುವರಿಸಬೇಕು. ಕಲಬುರಗಿಯಲ್ಲಿ ಸರ್ಕಾರದಿಂದ ಪ್ರತ್ಯೇಕ ಕಚೇರಿ ಆರಂಭಿಸಲಿ ಎಂದು ಒತ್ತಾಯಿಸಿದರು.

ಸಾಮಾಜಿಕ ಹೋರಾಟಗಾರ ಸಿರಿಗೇರಿ ಪನ್ನರಾಜ್ ಮಾತನಾಡಿ, ಬ್ರಿಟಿಷರ ಕಾಲದಿಂದಲೂ ಜಿಲ್ಲೆ ಹಾಗೂ ಆಂಧ್ರದ ಗಡಿ ಗ್ರಾಮಗಳಲ್ಲಿ ಸಿದ್ದ ಉಡುಪು ತಯಾರಿಕೆ ಗೃಹ ಉದ್ಯಮವಾಗಿದೆ. ಪ್ರಸ್ತುತ ಬಳ್ಳಾರಿಯಲ್ಲಿ 1,500 ರಿಂದ 2,000 ಗಾರ್ಮೆಂಟ್ಸ್ ತಯಾರಿಕಾ ಘಟಕಗಳಿವೆ. ಜೀನ್ಸ್ ಗಾರ್ಮೆಂಟ್, ಜೀನ್ಸ್ ವಾಷಿಂಗ್ ಘಟಕಗಳು ಕಾರ್ಯನಿರ್ವಹಿಸುತ್ತಿವೆ. ನಗರದಲ್ಲಿಯೇ 50,000 ಕ್ಕೂ ಹೆಚ್ಚು ನೇರ ಮತ್ತು ಪರೋಕ್ಷ ಉದ್ಯೋಗಗಳು ಸೃಷ್ಟಿಯಾಗಿವೆ. ಪ್ರತಿ ವರ್ಷ 2,000 ಕೋಟಿ ರೂ. ವ್ಯವಹಾರ ನಡೆಯುತ್ತಿದೆ. ಈ ಕಚೇರಿ ಕಲಬುರಗಿಗೆ ಸ್ಥಳಾಂತರಿಸಿದರೆ ಸಾರ್ವಜನಿಕರ ಸಹಕಾರದಲ್ಲಿ ಪ್ರತಿಭಟನೆ ನಡೆಸಲಾಗುತ್ತದೆ ಎಂದು ಎಚ್ಚರಿಸಿದರು.

ನಗರದ ಗಾಂಧಿಭವನದಿಂದ ಡಿಸಿ ಕಚೇರಿವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿ ಜಿಲ್ಲಾಡಳಿತದ ಮೂಲಕ ಸಿಎಂಗೆ ಮನವಿ ಸಲ್ಲಿಸಲಾಯಿತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net