

ಮಡಿಕೇರಿ: ಭಾರತೀಯ ಕ್ರೀಡಾ ಪ್ರಾಧಿಕಾರದ ಮೈದಾನದಲ್ಲಿ ಆಯೋಜಿಸಿದ್ದ ಪದವಿ ಪೂರ್ವ ಶಿಕ್ಷಣ ಇಲಾಖೆಯ ತಾಲೂಕು ಮಟ್ಟದ ಹಾಕಿ ಕ್ರೀಡಾ ಕೂಟದಲ್ಲಿ ಸೈಂಟ್ ಜೋಸೆಫ್ ಪದವಿ ಪೂರ್ವ ಕಾಲೇಜಿನ ತಂಡ ಪ್ರಥಮ ಸ್ಥಾನ ಪಡೆದುಕೊಂಡಿತ್ತು.
ನಾಪೋಕ್ಲು ಸರ್ಕಾರಿ ಪದವಿ ಪೂರ್ವ ಕಾಲೇಜಿನ ತಂಡ ದ್ವಿತೀಯ ಸ್ಥಾನ ಪಡೆದುಕೊಂಡಿತು. ಬಾಲಕಿಯರ ವಿಭಾಗದಲ್ಲಿ ನಗರದ ಸರ್ಕಾರಿ ಪದವಿ ಪೂರ್ವ ಕಾಲೇಜಿನ ತಂಡ ಪ್ರಥಮ ಸ್ಥಾನ ಪಡೆದುಕೊಂಡರೆ, ಸೈಂಟ್ ಮೈಕೆಲ್ ಪದವಿ ಪೂರ್ವ ಕಾಲೇಜಿನ ತಂಡವು ದ್ವಿತೀಯ ಸ್ಥಾನ ಪಡೆದುಕೊಂಡಿದೆ.
ಕ್ರೀಡಾಕೂಟವನ್ನು ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಪಿ.ಆರ್.ವಿಜಯ್‌ರವರು ಉದ್ಘಾಟಿಸಿದರು. ಕಾರ್ಯಕ್ರಮದಲ್ಲಿ ತಂಡದ ವ್ಯವಸ್ಥಾಪಕ ಮತ್ತು ಸರ್ಕಾರಿ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕ ಚಿದಾನಂದ, ಸೋಮಶೇಖರ ದೈಹಿಕ ಶಿಕ್ಷಣ ಉಪನ್ಯಾಸಕರಾದ ಗಿರಿಧರ್, ನಾಚಪ್ಪ, ಜಾನಕಿ ಅವರು ಭಾಗವಹಿಸಿದ್ದರು.