

ಮೈಸೂರು: ರಾಜ್ಯಾದ್ಯಂತ ಸ್ಥಳೀಯ ಸಂಸ್ಥೆಗಳಲ್ಲಿ ಸ್ವಚ್ಛತಾ ಕೆಲಸದಲ್ಲಿ ನಿರತರಾಗಿರುವ ಪೌರ ಕಾರ್ಮಿಕರು ಹಾಗೂ ಒಳಚರಂಡಿ ಸಹಾಯಕರನ್ನು ಕಾಯಂಗೊಳಿಸಬೇಕೆಂಬ ಬೇಡಿಕೆ ಈಡೇರಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಕೃತಜ್ಞತೆ ಸಲ್ಲಿಸುವುದಾಗಿ ರಾಜ್ಯ ನಗರಪಾಲಿಕೆ, ನಗರಸಭೆ, ಪುರಸಭೆಗಳ ಪೌರಕಾರ್ಮಿಕರ ಮಹಾಸಂಘದ ಅಧ್ಯಕ್ಷ ನಾರಾಯಣ ತಿಳಿಸಿದರು.
ವಿಧಾನಸಭಾ ಚುನಾವಣೆಗೂ ಮೊದಲು ಕಾಂಗ್ರೆಸ್ ಪೌರಕಾರ್ಮಿಕರ ಬೇಡಿಕೆ ಈಡೇರಿಸುವುದಾಗಿ ಭರವಸೆ ನೀಡಿತ್ತು. ಅದರಂತೆ ಬಜೆಟ್‌ನಲ್ಲಿ 24,005 ಪೌರ ಕಾರ್ಮಿಕರ ಕಾಯಂಗೆ ಅನುಮೋದನೆ ನೀಡಲಾಗಿದೆ. ಜತೆಗೆ 10 ಮಹಾನಗರ ಪಾಲಿಕೆಗಳಲ್ಲಿರುವ 529 ಒಳಚರಂಡಿ ಸಹಾಯಕರನ್ನು ಸಹ ಕಾಯಂಗೊಳಿಸುವ ಪ್ರಕ್ರಿಯೆಗೆ ಸಿಎಂ ಸಿದ್ದರಾಮಯ್ಯ ಚಾಲನೆ ನೀಡಿದ್ದಾರೆ ಎಂದು ಶನಿವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಪೌರಕಾರ್ಮಿಕ ಮುಖಂಡರಾದ ಎಸ್.ಎಂ.ಪಳನಿಸ್ವಾಮಿ, ಆರ್ಟಿಸ್ಟ್ ನಾಗರಾಜು, ಆರ್.ದಾಸು, ಪಳನಿ, ಗುರುದತ್ ಇದ್ದರು.