ನೀರಿನ ಕೊರತೆಯಾಗದಂತೆ ನಿಗಾವಹಿಸಿ - ಸಂಸದ ರಾಜಶೇಖರ ಹಿಟ್ನಾಳ ಸೂಚನೆ

tvg-1
ತಾವರಗೇರಾದಲ್ಲಿ ಏರ್ಪಡಿಸಿದ್ದ ಹೋಬಳಿ ಮಟ್ಟದ ಪ್ರಗತಿ ಪರಿಶೀಲನಾ ಸಭೆಯನ್ನು ಸಂಸದ ರಾಜಶೇಖರ ಹಿಟ್ನಾಳ ಉದ್ಘಾಟಿಸಿದರು. ತಹಸೀಲ್ದಾರ್ ಅಶೋಕ ಸಿಗ್ಗಾವಿ, ತಾಪಂ ಇಒ ಪಂಪಾಪತಿ ಹಿರೇಮಠ, ಪಪಂ ಮುಖ್ಯಾಧಿಕಾರಿ ಮಹೇಶ ಅಂಗಡಿ, ಮುಖಂಡ ದೊಡ್ಡಬಸನಗೌಡ ಬಯ್ಯಪೂರ ಇದ್ದರು.
Published on

ತಾವರಗೇರಾ: ಗ್ರಾಮಗಳಳಲ್ಲಿ ಕುಡಿವ ನೀರಿನ ಅಭಾವವಾಗದಂತೆ ನೋಡಿಕೊಳ್ಳುವುದು ಅಧಿಕಾರಿಗಳ ಜವಾಬ್ದಾರಿಯಾಗಿದೆ ಎಂದು ಸಂಸದ ರಾಜಶೇಖರ ಹಿಟ್ನಾಳ ಹೇಳಿದರು.

ಪಟ್ಟಣದ ಸರ್ಕಾರಿ ಪದವಿ ಕಾಲೇಜಿನ ಸಭಾಂಗಣದಲ್ಲಿ ಬುಧವಾರ ಹಮ್ಮಿಕೊಂಡಿದ್ದ ಹೋಬಳಿ ಮಟ್ಟದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದರು. ಗ್ರಾಮಗಳಲ್ಲಿ ಜಲ ಜೀವನ್ ಮಿಷನ್ ಯೋಜನೆಯಡಿ ನೀರು ಪೂರೈಸುವುದು ಅಧಿಕಾರಿಗಳ ಹೊಣೆ ಎಂದರು.

ಸಭೆಯಲ್ಲಿ ಕೃಷಿ, ಅರಣ್ಯ, ಆರೋಗ್ಯ , ಕುಡಿವ ನೀರು ,ಲೋಕೋಪಯೋಗಿ, ಜಿಪಂ., ಶಿಕ್ಷಣ, ಕೃಷಿ ಉತ್ಪನ್ನ ಮಾರುಕಟ್ಟೆ, ವಿದ್ಯುತ್ ಇಲಾಖೆ ಸೇರಿ ಇನ್ನಿತರ ಇಲಾಖೆಯ ಅಧಿಕಾರಿಗಳು ಆಯಾ ಇಲಾಖೆಯ ಪ್ರಗತಿ ವರದಿ ಒಪ್ಪಿಸಿದರು.

ಪಪಂ ಅಧ್ಯಕ್ಷ ನಾರಾಯಣಗೌಡ ಮೆದಿಕೇರಿ, ಸ್ಥಾಯಿ ಸಮಿತಿ ಅಧ್ಯಕ್ಷ ವೀರನಗೌಡ ಪಾಟೀಲ, ಪಂಚ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಫಾರೂಕ್ ಡಲಾಯತ್, ತಹಸೀಲ್ದಾರ್ ಅಶೋಕ ಸಿಗ್ಗಾವಿ, ತಾಪಂ ಇಒ ಪಂಪಾಪತಿ ಹಿರೇಮಠ, ಪಪಂ ಮುಖ್ಯಾಧಿಕಾರಿ ಮಹೇಶ ಅಂಗಡಿ, ತಾಲೂಕು ವೈದ್ಯಾಧಿಕಾರಿ ಡಾ.ಆನಂದ ಗೋಟೂರ, ಬಿಇಒ ಸುರೇಂದ್ರ ಕಾಂಬಳೆ, ಪಶು ವೈದ್ಯಾಧಿಕಾರಿ ಡಾ.ಆನಂದ, ಅಕ್ಷರ ದಾಸೋಹ ಎಡಿ ಸೋಮನಗೌಡ ಪಾಟೀಲ, ಜೆಸ್ಕಾಂ ಜೆ.ಇ.ರಶ್ಮಿ, ಕೃಷಿ ಅಧಿಕಾರಿ ಆಶಾ ರಾಠೋಡ ಮುಖಂಡ ದೊಡ್ಡಬಸನಗೌಡ ಬಯ್ಯಪೂರ, ಅನುಷ್ಠಾನ ಸಮಿತಿ ಸದಸ್ಯ ಅಮರೇಶ ಗಾಂಜಿ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net