ಬಿಸಿಯೂಟ ಸಿಬ್ಬಂದಿ ಸ್ವಚ್ಛತೆಗೆ ಆದ್ಯತೆ ನೀಡಲಿ

Untitled design (1)
Published on

ತಾವರಗೇರಾ: ಸಮೀಪದ ಜುಮಲಾಪೂರ ಸರ್ಕಾರಿ ಪ್ರೌಢಶಾಲೆಯಲ್ಲಿ ಶುಕ್ರವಾರ ಆರೋಗ್ಯ ಇಲಾಖೆಯಿಂದ ರಾಷ್ಟ್ರೀಯ ಬಾಲ ಸ್ವಾಸ್ಥ್ಯ ಕಾರ್ಯಕ್ರಮ (ಆರ್.ಬಿ.ಎಸ್.ಕೆ.) ನಡೆಯಿತು.

ಡಾ.ಸಂತೋಷ ಕುಮಾರ ಮಾತನಾಡಿ, ಶಾಲೆಯ ಬಿಸಿಯೂಟ ತಯಾರಿಸುವ ಸಿಬ್ಬಂದಿ ಸ್ವಚ್ಛತೆಗೆ ಆದ್ಯತೆ ನೀಡಬೇಕು. ತರಕಾರಿಗಳನ್ನು ಚನ್ನಾಗಿ ತೊಳೆದು ಅಡುಗೆ ತಯಾರಿಸಬೇಕು. ರಕ್ತಹೀನತೆ ತೊಂದರೆ ಇರುವ ವಿದ್ಯಾರ್ಥಿಗಳು ವಾರಕ್ಕೆ ಒಂದು ಐಪಿಎ ಮಾತ್ರೆ ತೆಗೆದುಕೊಳ್ಳಬೇಕು. ಶಿಕ್ಷಕರು ಇದರ ಬಗ್ಗೆ ಕಾಳಜಿ ವಹಿಸಬೇಕು ಎಂದು ತಿಳಿಸಿದರು.

ವಿದ್ಯಾರ್ಥಿಗಳಿಗೆ ಆರೋಗ್ಯ ತಪಾಸಣೆ ಮತ್ತು ಅನಿಮಿಯಾವನ್ನು ವೈದ್ಯರು ಪರೀಕ್ಷೆ ಮಾಡಿದರು. ಆರೋಗ್ಯ ಸಮಸ್ಯೆ ಇದ್ದವರಿಗೆ ಪ್ರಾಥಮಿಕ ಆರೋಗ್ಯ ಕೇಂದ್ರ ಅಥವಾ ಕಮ್ಯೂನಿಟಿ ಹೆಲ್ತ್ ಸೆಂಟರ್‌ಗೆ ಹೋಗಲು ತಿಳಿಸಲಾಯಿತು. ಮಕ್ಕಳಿಗೆ ಸ್ವಚ್ಛತೆ ಹಾಗೂ ಪೌಷ್ಟಿಕ ಆಹಾರದ ಬಗ್ಗೆ ಮಾಹಿತಿ ನೀಡಲಾಯಿತು. ಇಲಾಖೆಯ ಡಾ.ಶಿವಕುಮಾರ, ಹಿರಿಯ ಆರೋಗ್ಯಾಧಿಕಾರಿ ಹನಮವ್ವ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net