

ಬೆಂಗಳೂರು: ನೈಋತ್ಯ ರೈಲ್ವೆಯ ಬೆಂಗಳೂರು ವಿಭಾಗದ ವತಿಯಿಂದ ಮಹಾತ್ಮ ಗಾಂಧಿ ರೈಲ್ವೆ ಕಾಲೋನಿಯಲ್ಲಿರುವ ‘ಅನುಗ್ರಹ’ ರೈಲ್ವೆ ಸಮುದಾಯ ಭವನದಲ್ಲಿ 10ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯನ್ನು ಆಚರಿಸಲಾಯಿತು.
ರೈಲ್ವೆ ಸಿಬ್ಬಂದಿ ಮತ್ತು ಸಾರ್ವಜನಿಕರಲ್ಲಿ ಯೋಗವನ್ನು ಉತ್ತೇಜಿಸುವ ಉದ್ದೇಶದೊಂದಿಗೆ ಕಾರ್ಯಕ್ರಮದಲ್ಲಿ ಅನುಭವಿ ಯೋಗ ಶಿಕ್ಷಕರ ಮಾರ್ಗದರ್ಶನದಲ್ಲಿ ವಿವಿಧ ಆಸನಗಳನ್ನು ಮಾಡಲಾಯಿತು. ಹಾಗೂ ವಿಭಿನ್ನ ಯೋಗ ತಂತ್ರ, ದೈಹಿಕ ಮತ್ತು ಮಾನಸಿಕ ಯೋಗಕ್ಷೇಮದ ಮೇಲೆ ಯೋಗದ ಪ್ರಭಾವವನ್ನು ಒತ್ತಿಹೇಳಿದ ಯೋಗತಜ್ಞರು ಜೀವನದ ಗುಣಮಟ್ಟವನ್ನು ಹೆಚ್ಚಿಸುವಲ್ಲಿ ಯೋಗದ ಪ್ರಯೋಜನಗಳು ಮತ್ತು ಅದರ ಪ್ರಸ್ತುತತೆಯನ್ನು ವಿವರಿಸಿದರು.
ಕಾರ್ಯಕ್ರಮದಲ್ಲಿ ವಿಭಾಗೀಯ ರೈಲ್ವೆ ವ್ಯವಸ್ಥಾಪಕ ಯೋಗೇಶ್ ಮೋಹನ್, ಹೆಚ್ಚುವರಿ ವಿಭಾಗೀಯ ವ್ಯವಸ್ಥಾಪಕ ಪರೀಕ್ಷಿತ್ ಮೋಹನಪುರಿಯ, ಆಶುತೋಷ್ ಮಾದೂರ್, ಮತ್ತಿತರ ಹಿರಿಯ ರೈಲ್ವೆ ಅಧಿಕಾರಿಗಳು, ಸಿಬ್ಬಂದಿ ಮತ್ತು ಅವರ ಕುಟುಂಬ ಸದಸ್ಯರು ಭಾಗವಹಿಸಿದ್ದರು.