ಮೈಸೂರು: ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಕಳ್ಳತನ ಪ್ರಕರಣದ ಆರೋಪಿಯನ್ನು ವಿಜಯನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಸ್ವತ್ತು ಕಳವು ಪ್ರಕರಣದಲ್ಲಿ ಆರೋಪಿ ನ್ಯಾಯಾಲಯದ ವಿಚಾರಣೆಗೆ ಹಾಜರಾಗದೇ ಹಲವು ವರ್ಷಗಳಿಂದ ತಲೆಮರೆಸಿಕೊಂಡಿದ್ದರಿಂದ ಪತ್ತೆಗೆ ಸಬ್ ಇನ್ಸ್‌ಪೆಕ್ಟರ್ ಕೆ.ವಿಶ್ವನಾಥ್ ನೇತೃತ್ವದಲ್ಲಿ ವಿಶೇಷ ತಂಡವನ್ನು ರಚಿಸಲಾಗಿತ್ತು. ನಗರದಲ್ಲಿ ಇರುವ ಬಗ್ಗೆ ಖಚಿತ ಮಾಹಿತಿ ಮೇರೆಗೆ ಕಾರ್ಯಾಚರಣೆ ನಡೆಸಿ ಆರೋಪಿ ಬೈಲುಕುಪ್ಪೆ ನಿವಾಸಿ ಜಮಾಲ್ನನ್ನು ಬಂಧಿಸಿ ಐದನೇ ಜೆ.ಎಂ.ಎಫ್. ನ್ಯಾಯಾಲಯಕ್ಕೆ ಹಾಜರುಪಡಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.
ಆರೋಪಿಯು ಮೈಸೂರು ನಗರ, ಮಂಡ್ಯ ಜಿಲ್ಲೆಯಲ್ಲಿ ತಲಾ ಎರಡು ಪ್ರಕರಣ, ಮೈಸೂರು ಜಿಲ್ಲೆಯ ಮೂರು ಹಾಗೂ ಹಾಸನ ಜಿಲ್ಲೆಯಲ್ಲಿ ಒಂದು ಕಳವು ಪ್ರಕರಣಗಳಲ್ಲಿ ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿರುವುದು ತಿಳಿದು ಬಂದಿರುತ್ತದೆ.
ಎಸಿಪಿ ಜಿ.ಎಸ್.ಗಜೇಂದ್ರಪ್ರಸಾದ್ ಮಾರ್ಗದರ್ಶನದಲ್ಲಿ ವಿಜಯನಗರ ಠಾಣೆಯ ಇನ್‌ಸ್ಪೆಕ್ಟರ್ ಎಸ್.ಡಿ.ಸುರೇಶ್‌ಕುಮಾರ್ ನೇತೃತ್ವದಲ್ಲಿ ಎಸ್‌ಐ ಕೆ.ವಿಶ್ವನಾಥ್, ಸಿಬ್ಬಂದಿ ಉಮೇಶ್, ಎಂ.ಜೆ.ಶಂಕರ್, ತಿಲಕ್‌ಕುಮಾರ್, ಪ್ರದೀಪ್ ಕುಮಾರ್, ಜೆ.ಚಂದ್ರ ಜೆ, ಕೆ.ಎನ್.ಮಂಜುನಾಥ್, ಸಂಜಯ್ ಕಾರ್ಯಾಚರಣೆ ನಡೆಸಿದ್ದರು.