ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

arrest
Published on

ಕಾಸರಗೋಡು: ತಲೆಮರೆಸಿಕೊಂಡಿದ್ದ ಪೋಕ್ಸೋ ಪ್ರಕರಣದ ಆರೋಪಿ ಪಶ್ಚಿಮ ಬಂಗಾಳ ನಿವಾಸಿ ಗೋಲಂ ಮಹಮ್ಮದ್ ಮುಸ್ತಫಾ ಎಂಬಾತನನ್ನು ವಿದ್ಯಾನಗರ ಠಾಣೆ ಪೊಲೀಸರು ಪಶ್ಚಿಮ ಬಂಗಾಳದಿಂದ ಬಂಧಿಸಿ ಕರೆತಂದಿದ್ದಾರೆ. 2022ರಲ್ಲಿ ವಿದ್ಯಾನಗರ ಪೊಲೀಸ್ ಠಾಣೆ ವ್ಯಾಪ್ತಿಯ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣದಲ್ಲಿ ಈತ ಆರೋಪಿಯಾಗಿದ್ದು, ಪ್ರಕರಣದ ವಿಚಾರಣೆ ಕಾಸರಗೋಡು ಫಾಸ್ಟ್ ಟ್ರಾೃಕ್ ನ್ಯಾಯಾಲಯದಲ್ಲಿ ಆರಂಭಗೊಳ್ಳುತ್ತಿದ್ದಂತೆ ಮಹಮ್ಮದ್ ಮುಸ್ತಫಾ ತಲೆಮರೆಸಿಕೊಂಡಿದ್ದನು. ಈತನ ಬಂಧನಕ್ಕೆ ನ್ಯಾಯಾಲಯ ವಾರಂಟ್ ಜಾರಿಗೊಳಿಸಿತ್ತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net