ಪೊಲೀಸರ ಕೈಯಿಂದ ತಪ್ಪಿಸಿಕೊಂಡ ಆರೋಪಿ ಸೆರೆ

Arrest Kaidhi
Published on

ಸುಳ್ಯ: ಕೆಲ ದಿನಗಳ ಹಿಂದೆ ಸುಳ್ಯ ಪೊಲೀಸರಿಂದ ತಪ್ಪಿಸಿಕೊಂಡ ಆರೋಪಿಯನ್ನು ಮತ್ತೆ ಬಂಧಿಸಿ ಕರೆತರುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ದರೋಡೆ ಪ್ರಕರಣವೊಂದರಲ್ಲಿ ತಲೆ ಮರೆಸಿಕೊಂಡಿದ್ದ ತಮಿಳುನಾಡು ಮೂಲದ ಆರೋಪಿಯನ್ನು ಸುಳ್ಯ ಪೊಲೀಸರು ವಶಕ್ಕೆ ಪಡೆದು ಸರ್ಕಾರಿ ಆಸ್ಪತ್ರೆಯಲ್ಲಿ ವೈದ್ಯಕೀಯ ಚಿಕಿತ್ಸೆಗಾಗಿ ತೆರಳಿದ ಸಂದರ್ಭದಲ್ಲಿ ಆರೋಪಿ ತಪ್ಪಿಸಿಕೊಂಡಿದ್ದ.

ಖಚಿತ ಮಾಹಿತಿಯ ಮೇರೆಗೆ ಸುಳ್ಯ ಪೊಲೀಸರು ತಮಿಳುನಾಡಿಗೆ ತೆರಳಿ ಅಲ್ಲಿಂದ ಆರೋಪಿಯನ್ನು ಬಂಧಿಸಿ ಕರೆತರುವಲ್ಲಿ ಯಶಸ್ವಿಯಾಗಿದ್ದಾರೆ. ತನ್ನ ಗುರುತು ಪತ್ತೆ ಹಚ್ಚದಂತೆ ಆರೋಪಿ ಗಡ್ಡ, ಮೀಸೆ ಹಾಗೂ ತಲೆ ಬೋಳಿಸಿದ್ದ ಎನ್ನಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net