ಗಾಂಜಾ ಸಾಗಿಸುತ್ತಿದ್ದ ಆರೋಪಿ ಬಂಧನ

crime
Published on

ಗಾಂಜಾ ಸಾಗಿಸುತ್ತಿದ್ದ ವ್ಯಕ್ತಿಯನ್ನು ಬಂಧಿಸಿರುವ ಜಿಲ್ಲಾ ಸೆನ್ ಠಾಣೆ ಪೊಲೀಸರು, 1 ಕೆ.ಜಿ. 555 ಗ್ರಾಂ ಗಾಂಜಾ ಮತ್ತು ಸ್ಕೂಟರ್ ವಶಪಡಿಸಿಕೊಂಡಿದ್ದಾರೆ.

ಸಾತಗಳ್ಳಿ ಗ್ರಾಮದ ಬಳಿ ಮಾರಾಟ ಮಾಡಲು ಗಾಂಜಾ ಸಾಗಣೆ ಮಾಡಲಾಗುತ್ತಿದೆ ಎಂಬ ಖಚಿತ ಮಾಹಿತಿ ಮೇರೆಗೆ ಸ್ಥಳಕ್ಕೆ ಭೇಟಿ ನೀಡಿದ ಜಿಲ್ಲಾ ಸೆನ್ ಠಾಣೆ ಪೊಲೀಸ್ ಇನ್ಸ್‌ಪೆಕ ್ಟರ್ ಪುರುಷೋತ್ತಮ ಮತ್ತು ತಂಡ ಆರೋಪಿಯನ್ನು ಬಂಧಿಸಿದೆ. ಈ ಸಂಬಂಧ ಸೆನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net