ಭಯೋತ್ಪಾದಕರ ಕೃತ್ಯ ಎಂದಿಗೂ ಸಹಿಸಲ್ಲ

24M.D.R.3
ಮದ್ದೂರು ತಾಲೂಕಿನ ಕಬ್ಬಾರೆ ಗ್ರಾಮದಲ್ಲಿ 95 ಲಕ್ಷ ರೂ. ವೆಚ್ಚದ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಶಾಸಕ ಕೆ.ಎಂ.ಉದಯ್ ಚಾಲನೆ ನೀಡಿದರು. ಚಲುವರಾಜು, ರಾಘವೇಂದ್ರ, ಶೈಲಜಾ, ಬೀರೇಶ್, ಸುರೇಶ್ ಇದ್ದರು.
Published on

ಮದ್ದೂರು: ಕಾಶ್ಮೀರ ಶ್ರೀನಗರದ ಪಹಲ್ಗಾಮ್‌ನಲ್ಲಿ ನಡೆದ 28 ಜನರನ್ನು ಹತ್ಯೆ ನಡೆಸಿದ ಭಯೋತ್ಪಾದಕರ ಕೃತ್ಯವನ್ನು ಭಾರತೀಯರಾದ ನಾವು ಎಂದಿಗೂ ಸಹಿಸುವುದಿಲ್ಲ ಎಂದು ಶಾಸಕ ಕೆ.ಎಂ.ಉದಯ್ ತಿಳಿಸಿದರು.

ತಾಲೂಕಿನ ಕಬ್ಬಾರೆ ಗ್ರಾಮದಲ್ಲಿ 95 ಲಕ್ಷ ರೂ. ವೆಚ್ಚದ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಹಾಗೂ ಅರುವನಹಳ್ಳಿಯಲ್ಲಿ 29 ಲಕ್ಷ ರೂ. ವೆಚ್ಚದ ನೂತನ ಶಾಲಾ ಕೊಠಡಿಗಳ ನಿರ್ಮಾಣ ಕಾಮಗಾರಿಗೆ ಗುರುವಾರ ಚಾಲನೆ ನೀಡಿ ಮಾತನಾಡಿದರು.

ಕಾಶ್ಮೀರ ನಮ್ಮ ಭಾರತ ದೇಶದ ಮುಕುಟವಿದ್ದ ಹಾಗೆ. ಅಲ್ಲಿ ಪ್ರವಾಸಕ್ಕೆ ತೆರಳಿದ್ದ ಪ್ರವಾಸಿಗರ ಮೇಲೆ ಭಯೋತ್ಪಾದಕರು ಅತ್ಯಂತ ಅಮಾನುಷವಾಗಿ ಗುಂಡಿಕ್ಕಿ ಹತ್ಯೆ ಮಾಡಿರುವುದು ಖಂಡನೀಯ ಎಂದರು.

ಈ ವಿಷಯದಲ್ಲಿ ಒಗ್ಗಟ್ಟಿನಿಂದ ಎಲ್ಲರೂ ಹೋರಾಟ ಮಾಡಿ ಭಯೋತ್ಪಾದನೆಯ ಹುಟ್ಟಡಗಿಸುವ ಕೆಲಸವನ್ನು ಮಾಡಬೇಕು ಹಾಗೂ ದೇಶವೂ ಕೂಡ ಭಯೋತ್ಪಾದಕರ ವಿರುದ್ಧ ಯಾವುದೇ ಮುಲಾಜಿಲ್ಲದ ಕ್ರಮವನ್ನು ಕೈಗೊಳ್ಳುವ ಮೂಲಕ ನಮ್ಮ ಶಕ್ತಿ ಸಾಮರ್ಥ್ಯವನ್ನು ತೋರಿಸಬೇಕಾಗಿರುವ ಸಂದರ್ಭ ಬಂದಿದೆ ಎಂದರು.

ತಾಲೂಕು ವ್ಯಾಪ್ತಿಯಲ್ಲಿ ದುಸ್ಥಿತಿಯಲ್ಲಿರುವ ಸರ್ಕಾರಿ ಶಾಲೆಗಳನ್ನು ಗುರುತಿಸಿ ನೂತನ ಕೊಠಡಿ ನಿರ್ಮಾಣ ಮಾಡುವ ಕೆಲಸಕ್ಕೆ ಒತ್ತು ನೀಡುತ್ತಿದ್ದೇನೆ. ಈಗ ಬೇಸಿಗೆ ರಜೆ ಇದ್ದು ಶಾಲೆಗಳು ಆರಂಭವಾಗುವುದಕ್ಕೂ ಮುನ್ನ ಕೊಠಡಿಗಳ ನಿರ್ಮಾಣ ಮಾಡಲಾಗುವುದು ಎಂದರು.

ಅಂತೆಯೇ ಗ್ರಾಮೀಣ ಭಾಗದ ರಸ್ತೆಗಳ ಅಭಿವೃದ್ಧಿಗೆ ಈಗಾಗಲೇ ಗಮನ ನೀಡುತ್ತಿದ್ದು ಇಂದು ಕಬ್ಬಾರೆ-ಸೋಮನಹಳ್ಳಿ ಸಂಪರ್ಕ ಕಲ್ಪಿಸುವ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಚಾಲನೆ ನೀಡಿದ್ದೇನೆ ಎಂದರು.

ತಾಲೂಕು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಚಲುವರಾಜು, ಗ್ರಾ.ಪಂ.ಸದಸ್ಯ ಕಬ್ಬಾರೆ ರಾಘವೇಂದ್ರ ಮುಖಂಡರಾದ ಶೈಲಜಾ, ಬೀರೇಶ್, ಹಳ್ಳಿಕೆರೆ ಸುರೇಶ್, ಶ್ರೀನಿವಾಸ್, ಪ್ರಭಾಕರ್ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net