ಎಂ.ಟಿ.ಕೃಷ್ಣೇಗೌಡ ಸೇರ್ಪಡೆಯಿಂದ ಪಕ್ಷಕ್ಕೆ ಶಕ್ತಿ ಬಂದಿದೆ

oplus_0
oplus_0
Published on


ಹಾಸನ : ಅರಕಲಗೂಡು ಮುಖಂಡ ಎಂ.ಟಿ.ಕೃಷ್ಣೇಗೌಡ ಕಾಂಗ್ರೆಸ್ ಸೇರ್ಪಡೆಯಿಂದಾಗಿ ಪಕ್ಷಕ್ಕೆ ಹೆಚ್ಚಿನ ಶಕ್ತಿ ಬಂದಿದೆ ಎಂದು ಕಾಂಗ್ರೆಸ್ ಜಿಲ್ಲಾಧ್ಯಕ್ಷ ಲಕ್ಷ್ಮಣ್ ತಿಳಿಸಿದರು.


ಎಂ.ಟಿ.ಕೃಷ್ಣೇಗೌಡ ಅವರು ಪಟ್ಟಣಕ್ಕೆ ಶನಿವಾರ ಆಗಮಿಸಿದ ಹಿನ್ನೆಲೆಯಲ್ಲಿ ಕಾರ್ಯಕರ್ತರು ಹಾಗೂ ಅಭಿಮಾನಿಗಳಿಂದ ಸ್ವಾಗತ ಸ್ವೀಕರಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಳೆದ ವಿಧಾನಸಭಾ ಚುನಾವಣೆಯಲ್ಲಿ ಅನಿವಾರ್ಯ ಕಾರಣಗಳಿಂದ ಎಂ.ಟಿ.ಕೃಷ್ಣೇಗೌಡ ಅವರು ದೂರ ಉಳಿದಿದ್ದರು. ಪಕ್ಷೇತರವಾಗಿ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಿ 56 ಸಾವಿರ ಮತ ಪಡೆದಿದ್ದರು. ಕೃಷ್ಣೇಗೌಡ ಅವರು ಯಾವುದೇ ಷರತ್ತು ಇಲ್ಲದೆ ಪಕ್ಷಕ್ಕೆ ಬಂದಿದ್ದಾರೆ ಎಂದು ತಿಳಿಸಿದರು.


ಎಂ.ಟಿ. ಕೃಷ್ಣೇಗೌಡ ಮಾತನಾಡಿ, ಕಾಂಗ್ರೆಸ್ ಬಡವರ ಪರವಾಗಿದೆ. ಪಕ್ಷದ ತತ್ವ, ಸಿದ್ಧಾಂತಗಳನ್ನು ಮೆಚ್ಚಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ಒಕ್ಕೋರಲ ಆಹ್ವಾನದ ಮೇರೆಗೆ ಪಕ್ಷ ಸೇರಿದ್ದು, ನಾನೂ ಕೂಡ ಬಡವರ ಪರವಾಗಿ ಕೆಲಸ ಮಾಡುತ್ತೇನೆ ಎಂದು ತಿಳಿಸಿದರು.


ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪ್ರಸನ್ನ ಕುಮಾರ್ ಮಾತನಾಡಿದರು. ಮುಖಂಡರಾದ ಡಾ.ದಿನೇಶ್ ಭೈರೇಗೌಡ, ಸಿ.ಡಿ.ದಿವಾಕರ್ ಗೌಡ, ಸುರೇಶ್, ಗಣೇಶ್ ವೇಲಾಪುರಿ, ಅಬ್ದುಲ್ ಬಾಸಿತ್, ರಾಮೇಗೌಡ, ಹೇಮಂತಕುಮಾರ್, ಎಲ್.ಬಿ. ಕೃಷ್ಣ, ಮಧು, ಜಮೀರ್ ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net