ಅಬಕಾರಿ ಸಚಿವರ ವಿರುದ್ಧ ಆರೋಪ ದುರುದ್ದೇಶಪೂರಿತ: ಮೂಲ್ಕಿ ಬ್ಲಾಕ್ ಯುವ ಕಾಂಗ್ರೆಸ್ ಆಕ್ರೋಶ

Mul_Excise
Published on

ಮೂಲ್ಕಿ: ರಾಜ್ಯ ಅಬಕಾರಿ ಸಚಿವ ಆರ್.ಬಿ. ತಿವ್ಮಾಪುರ ವಿರುದ್ಧ ಸುಳ್ಳು ಆರೋಪ ವಾಡಿ ಅವರ ಗೌರವಕ್ಕೆ ಮಸಿ ಬಳಿಯಲು ಪ್ರಯತ್ನಿಸುತ್ತಿರುವ ರಾಜ್ಯ ವೈನ್ ಮರ್ಚಂಟ್ ಅಸೋಸಿಯೇಶನ್ ಅಧ್ಯಕ್ಷ ಗುರುಸ್ವಾಮಿ ಮತ್ತು ಪ್ರಧಾನ ಕಾರ್ಯದರ್ಶಿ ಗೋವಿಂದರಾಜ ಹೆಗಡೆ ಮತ್ತು ಕೆಲವರ ವಿರುದ್ಧ ಪ್ರಕರಣ ದಾಖಲಿಸಿ ಸೂಕ್ತ ಕಾನೂನು ಕ್ರಮ ಕೈಗೊಳ್ಳುವುದು ಹಾಗೂ ಆ ಸಂಸ್ಥೆಯ ಲೈಸೆನ್ಸ್ ರದ್ದುಗೊಳಿಸಿ ತನಿಖೆ ನಡೆಸುವಂತೆ ಮೂಲ್ಕಿ ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಪೂಜಾರ್ ಸರ್ಕಾರಕ್ಕ್ಕೆ ಮನವಿ ಸಲ್ಲಿಸಿದ್ದಾರೆ.

ರಾಜ್ಯದಲ್ಲಿ 3 ವಿಧಾನಸಭಾ ಸ್ಥಾನಗಳಿಗೆ ಉಪಚುನಾವಣೆ ಮತ್ತು ಮಹಾರಾಷ್ಟ್ರ ರಾಜ್ಯದಲ್ಲಿನ ವಿಧಾನಸಭೆ ಚುನಾವಣೆಯನ್ನು ಗಮನದಲ್ಲಿರಿಸಿ ಆರ್.ಬಿ. ತಿವ್ಮಾಪುರ ಮೇಲೆ ವಿರೋಧ ಪಕ್ಷ ರಾಜಕೀಯ ಲಾಭಕ್ಕೋಸ್ಕರ ಅಬಕಾರಿ ಇಲಾಖೆಯಲ್ಲಿ ನೂರಾರು ಕೋಟಿ ಭ್ರಷ್ಟಾಚಾರದ ಆರೋಪ ವಾಡಿದ್ದಾರೆ. ರಾಜ್ಯ ವೈನ್ ಮರ್ಚಂಟ್ ಅಸೋಸಿಯೇಶನ್ ಅಧ್ಯಕ್ಷ ಗುರುಸ್ವಾಮಿ ಮತ್ತು ಪ್ರಧಾನ ಕಾರ್ಯದರ್ಶಿ ಗೋವಿಂದರಾಜ ಹೆಗಡೆ ಸಂಸ್ಥೆಯನ್ನು ತಮ್ಮ ಸ್ವಾರ್ಥಕ್ಕೆ ಬಳಸಿಕೊಂಡು ಅಬಕಾರಿ ಸಚಿವರು ಮತ್ತು ಉನ್ನತ ಅಧಿಕಾರಿಗಳನ್ನು ಬ್ಲಾಕ್ ಮೇಲ್ ವಾಡುತ್ತಿದ್ದಾರೆ. ಹಾಗಾಗಿಕರ್ನಾಟಕ ರಾಜ್ಯ ವೈನ್ ಮರ್ಚಂಟ್ ಅಸೋಸಿಯೇಶನ್‌ನ್ನು ತಕ್ಷಣವೇ ಸೂಪರ್ ಸೀಡ್ ಮಾಡಿ ಲೈಸೆನ್ಸ್ ರದ್ದುಪಡಿಸಿ, ತನಿಖೆ ಮಾಡಬೇಕು ಎಂದು ಮನವಿಯಲ್ಲಿ ತಿಳಿಸಿದ್ದಾರೆ.

ದಲಿತ ಮುಖಂಡ ರಮೇಶ್ ಹಂಗರಗಿ, ಮೂಲ್ಕಿ ನಗರ ಪಂಚಾಯಿತಿ ನಾಮನಿರ್ದೇಶಿತ ಸದಸ್ಯ ಭೀಮಶಂಕರ ಆರ್.ಕೆ. ಹಾಜರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net