ಸರ್ಕಾರದಲ್ಲಿ ಅನುದಾನವಿಲ್ಲವೆಂಬ ಆರೋಪ ಸುಳ್ಳು

18-GPT-3
ಗುಂಡ್ಲುಪೇಟೆ ತಾಲೂಕಿನ ಚನ್ನವಡೆಯನಪುರ ಗ್ರಾಮದಲ್ಲಿ ರಸ್ತೆ ನಿರ್ಮಾಣ ಕಾಮಗಾರಿಗೆ ಎಚ್.ಎಂ.ಗಣೇಶ್ ಪ್ರಸಾದ್ ಭೂಮಿಪೂಜೆ ನೆರವೇರಿಸಿದರು. ಎಚ್.ಎನ್.ಬಸವರಾಜು, ಬಿ.ಎಂ.ಮುನಿರಾಜು ಇದ್ದರು.
Published on

ಗುಂಡ್ಲುಪೇಟೆ: ಮುಖ್ಯಮಂತ್ರಿ ವಿಶೇಷ ಅನುದಾನದಲ್ಲಿ ತಾಲೂಕಿನ ಹದಗೆಟ್ಟ ರಸ್ತೆಗಳನ್ನು ನಿರ್ಮಾಣ ಮಾಡುವ ಕಾಮಗಾರಿಗಳಿಗೆ ಚಾಲನೆ ನೀಡಲಾಗುತ್ತಿದೆ ಎಂದು ಶಾಸಕ ಎಚ್.ಎಂ.ಗಣೇಶ್ ಪ್ರಸಾದ್ ಹೇಳಿದರು.

ಬುಧವಾರ ತಾಲೂಕಿನ ಚನ್ನವಡೆಯನಪುರ ಗ್ರಾಮದಲ್ಲಿ ವಿಶೇಷ ಅನುದಾನದಲ್ಲಿ ಸಿಸಿ ರಸ್ತೆ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿ ಅವರು ಮಾತನಾಡಿದರು.

ಸರ್ಕಾರದಲ್ಲಿ ಅನುದಾನ ಇಲ್ಲ ಎಂದು ವಿರೋಧ ಪಕ್ಷಗಳು ಅಪಪ್ರಚಾರ ಮಾಡುತ್ತಿವೆ. ಆದರೆ ಇದು ಸಂಪೂರ್ಣ ಸುಳ್ಳಾಗಿದ್ದು ಸರ್ಕಾರ ರಸ್ತೆಗಳ ಅಭಿವೃದ್ದಿಗೆ 25 ಕೋಟಿ ರೂ. ಅನುದಾನ ನೀಡಿದೆ. ತಾಲೂಕಿನ ಕೋಟೆಕೆರೆ, ಚಿಕ್ಕಾಟಿ ಮುಂತಾದ ಗ್ರಾಮಗಳಲ್ಲಿ ಹಾಗೂ ಆಯ್ದ ಗ್ರಾಮಗಳಲ್ಲಿ ಸಿಸಿ ರಸ್ತೆಗಳ ನಿರ್ಮಾಣ ಕಾಮಗಾರಿ ಕೈಗೊಳ್ಳಲಾಗಿದೆ. ಪಟ್ಟಣಕ್ಕೆ ಹಿಂದುಳಿದ ವರ್ಗಗಳ ಹಾಸ್ಟೆಲ್ ಮಂಜೂರಾಗಿದ್ದು ಸದ್ಯದಲ್ಲಿಯೇ ಇದರ ಕಟ್ಟಡ ನಿರ್ಮಾಣ ಕಾಮಗಾರಿ ಆರಂಭವಾಗಲಿದೆ ಎಂದು ಹೇಳಿದರು.

ತಾಲೂಕು ಪಂಚಾಯಿತಿ ಮಾಜಿ ಅಧ್ಯಕ್ಷ ಎಚ್.ಎನ್.ಬಸವರಾಜು, ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ಬಿ.ಎಂ.ಮುನಿರಾಜು ಸೇರಿದಂತೆ ಹಲವರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net