ವಾರ್ಷಿಕ ಸ್ನೇಹ ಸಮ್ಮೇಳನ ನಾಳೆ

Vijayavani-Featured-Image
Published on

ವಿಜಯವಾಣಿ ಸುದ್ದಿಜಾಲ ಧಾರವಾಡ
ನಗರದ ಕೆ.ಇ. ಬೋಡಿರ್ನ ಪ್ರಥಮ ದರ್ಜೆ ಕಲಾ ಹಾಗೂ ವಾಣಿಜ್ಯ ಕಾಲೇಜಿನ ವಾರ್ಷಿಕ ಸ್ನೇಹ ಸಮ್ಮೇಳನ, ವಿದ್ಯಾರ್ಥಿ ಒಕ್ಕೂಟ, ಎನ್​ಎಸ್​ಎಸ್​ ಮತ್ತು ಕ್ರೀಡಾ ಚಟುವಟಿಕೆಗಳ ಸಮಾರೋಪ ಸಮಾರಂಭವನ್ನು ಜು. 12ರಂದು ಬೆಳಗ್ಗೆ 10.30ಕ್ಕೆ ಶಿವಾಜಿ ವೃತ್ತ ಬಳಿಯ ಕಾಲೇಜಿನ ಸಭಾಭವನದಲ್ಲಿ ಏರ್ಪಡಿಸಲಾಗಿದೆ.
ಅತಿಥಿಯಾಗಿ ಸ್ವರ್ಣ ಗ್ರುಪ್​ ಆಫ ಕಂಪನಿ ವ್ಯವಸ್ಥಾಪಕ ನಿರ್ದೇಶಕ ಡಾ.ಚಿ.ವಿ.ಎಸ್​.ವಿ.ಪ್ರಸಾದ ಭಾಗವಹಿಸಲಿದ್ದಾರೆ. ಕೆ.ಇ.ಬೋರ್ಡ್​ ಕಾಲೇಜಿನ ಆಡಳಿತ ಮಂಡಳಿ ಕಾರ್ಯಾಧ್ಯಕ್ಷ ಡಾ. ಸುನೀಲ ಪುರೋಹಿತ ಉಪಸ್ಥಿತರಿರುವರು. ಪ್ರಾಚಾರ್ಯ ಪ್ರೊ. ಎಂ.ಎ. ಸಿದ್ಧಾಂತಿ ಅಧ್ಯಕ್ಷತೆ ವಹಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net