

ಮಂಗಳೂರು: ವಿದ್ಯಾರ್ಥಿಗಳು ಹೆಚ್ಚೆಚ್ಚು ಕ್ರೀಡೆಗಳಲ್ಲಿ ಭಾಗವಹಿಸುವ ಮೂಲಕ ಆರೋಗ್ಯವಂತರಾಗಿ ಇರಬಹುದು, ಕ್ರೀಡೆಯಿಂದ ಉತ್ತಮ ಆರೋಗ್ಯ ಸಾಧ್ಯ ಎಂದು ಹಿಂದು ವಿದ್ಯಾದಾಯಿನೀ ಸಂಘದ ಆಡಳಿತ ಮಂಡಳಿ ಸದಸ್ಯ ಪ್ರಸಿದ್ಧ ಪಿ. ಹೇಳಿದರು.
ಸುರತ್ಕಲ್‌ನ ಅನುದಾನಿತ ವಿದ್ಯಾದಾಯಿನೀ ಪ್ರೌಢ ಶಾಲೆಯಲ್ಲಿ ನಡೆದ ವಾರ್ಷಿಕ ಕ್ರೀಡಾ ಕೂಟ ಉದ್ಘಾಟಿಸಿ ಮಾತನಾಡಿದರು.
ಕ್ರೀಡೆ ಎಂಬುದು ಸಂಘಟಿತ ಸ್ಪರ್ಧಾತ್ಮಕ ಕೌಶಲ್ಯ ಪೂರ್ಣ ದೈಹಿಕ ಚಟುವಟಿಕೆಯಾಗಿದ್ದು, ಕ್ರೀಡೆ ಮನುಷ್ಯನ ಮನಸ್ಸನ್ನು ಸದಾ ಉತ್ಸಾಹದಿಂದ ಹಾಗೂ ಸದಾ ಚಟುವಟಿಕೆಯಿಂದ ಇರಲು ಸಹಕಾರಿಯಾಗುತ್ತದೆ ಎಂದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಹಿಂದು ವಿದ್ಯಾದಾಯಿನೀ ಸಂಘದ ಜೊತೆ ಕೋಶಾಧಿಕಾರಿ ರಮೇಶ್ ಟಿ.ಎನ್, ಮಕ್ಕಳು ಕಲಿಕೆಯನ್ನು ಅಭ್ಯಾಸ ಮಾಡುವುದರ ಜೊತೆಗೆ ಕ್ರೀಡೆಯಲ್ಲಿಯೂ ಸಾಧನೆ ಮಾಡುವಂತಾಗಬೇಕು. ಕ್ರೀಡಾ ಸ್ಪೂರ್ತಿಯಿಂದ ಭಾಗವಹಿಸುವ ಎಲ್ಲಾ ಕ್ರೀಡಾಳುಗಳಿಗೆ ಪ್ರೋತ್ಸಾಹ ಅಗತ್ಯ ಎಂದರು.
ಶಾಲಾ ರಕ್ಷಕ ಶಿಕ್ಷಕ ಸಂಘದ ಗೌರವಾಧ್ಯಕ್ಷ ಗಂಗಾಧರ ಪೂಜಾರಿ, ವಿದ್ಯಾದಾಯಿನೀ ಆಂಗ್ಲ ಮಾದ್ಯಮ ಶಾಲೆಯ ಪ್ರಾಂಶುಪಾಲ ಡಾ. ಶಶಿಕುಮಾರ್ ಕೆ.ಸಿ, ಹಿಂದು ವಿದ್ಯಾದಾಯಿನೀ ಸಂಘದ ಆಡಳಿತ ಅಧಿಕಾರಿ ಮೃದುಲಾ ಬಿನು, ಹಿಂದು ವಿದ್ಯಾದಾಯಿನೀ ಸಂಘದ ಜೊತೆ ಕಾರ್ಯದರ್ಶಿ ಎಂ.ಜಿ ರಾಮಚಂದ್ರ, ವಿದ್ಯಾದಾಯಿನೀ ಸ್ಪೋರ್ಟ್ಸ್ ಅಕಾಡೆಮಿ ಸಂಯೋಜಕ ಸುಬ್ರಹ್ಮಣ್ಯ ಟಿ., ದೈಹಿಕ ಶಿಕ್ಷಣ ಶಿಕ್ಷಕ ಕಿಶೋರ್, ಗೋವಿಂದ ದಾಸ ಪದವಿ ಪೂರ್ವ ಕಾಲೇಜಿನ ದೈಹಿಕ ಶಿಕ್ಷಣ ಶಿಕ್ಷಕ ಮೋಹನ್, ಜಿ.ಎಚ್.ಎಸ್ ಐದನೇ ಬ್ಲಾಕ್ ಕಾಟಿಪಳ್ಳ ಇಲ್ಲಿನ ದೈಹಿಕ ಶಿಕ್ಷಣ ಶಿಕ್ಷಕಿ ರಾಜಶ್ರೀ ಉಪಸ್ಥಿತರಿದ್ದರು.
ಹಿಂದು ವಿದ್ಯಾದಾಯಿನೀ ಸಂಘದ ಸಾರ್ವಜನಿಕ ಸಂಪರ್ಕಾಧಿಕಾರಿ ಸುಧಾಕರರಾವ್ ಪೇಜಾವರ ಹಾಗೂ ಮುಖ್ಯೋಪಾಧ್ಯಾಯ ಬಾಲಚಂದ್ರ ಕೆ. ಸ್ವಾಗತಿಸಿದರು. ದಿವಸ್ಪತಿ ಕರ‌್ಯಕ್ರಮ ನಿರೂಪಿಸಿದರು. ದೈಹಿಕ ಶಿಕ್ಷಣ ಶಿಕ್ಷಕಿ ಸೌಮ್ಯ ವಂದಿಸಿದರು.