ಕಳ್ಳಬಟ್ಟಿ ತಯಾರಿಸುತ್ತಿದ್ದವನ ಬಂಧನ

28blrp1
Published on

ಬೇಲೂರು: ತಾಲೂಕಿನ ಬೆಳ್ಳೊಟ್ಟೆ, ಮೇಲನಹಳ್ಳಿ ಗ್ರಾಮಗಳಲ್ಲಿ ಅಕ್ರಮವಾಗಿ ಕಳ್ಳಬಟ್ಟಿ ಸರಾಯಿ ತಯಾರಿಸುತ್ತಿದ್ದ ಇಬ್ಬರ ವಿರುದ್ಧ ಪ್ರಕರಣ ದಾಖಲಾಗಿದ್ದು, ಒಬ್ಬನನ್ನು ಪೊಲೀಸರು ಬಂಧಿಸಿದ್ದಾರೆ.

ಶಂಕರ ಹಾಗೂ ರುದ್ರೇಶ್ ಕಳ್ಳಬಟ್ಟಿ ತಯಾರಿಸುತ್ತಿದ್ದವರು. ಈ ಬಗ್ಗೆ ಖಚಿತ ಮಾಹಿತಿ ಬಂದ ಹಿನ್ನೆಲೆಯಲ್ಲಿ ದಾಳಿ ನಡೆಸಿದ ಅಬಕಾರಿ ಅಧಿಕಾರಿಗಳ ತಂಡ 4 ಲೀಟರ್ ಕಳ್ಳಬಟ್ಟಿ ಸಾರಾಯಿ ಹಾಗೂ 40 ಲೀ. ಬೆಲ್ಲದ ಕೊಳೆ ಹಾಗೂ ಪರಿಕರಗಳನ್ನು ವಶಕ್ಕೆ ಪಡೆದಿದ್ದಾರೆ.

ಶಂಕರ ಎಂಬಾತನನ್ನ ಬಂಧಿಸಿ ನ್ಯಾಯಾಂಗ ವಶಕ್ಕೆ ಒಪ್ಪಿಸಲಾಗಿದೆ. ರುದ್ರೇಶ್ ತಪ್ಪಿಸಿಕೊಂಡಿದ್ದು, ಆತನ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ. ದಾಳಿಯ ನೇತೃತ್ವವನ್ನು ಅಬಕಾರಿ ಉಪ ಆಯುಕ್ತ ಗೋಪಾಲಕೃಷ್ಣೇಗೌಡ, ಉಪಾಧೀಕ್ಷಕ ವಿಜಯ್‌ಕುಮಾರ್, ನಿರೀಕ್ಷಕ ಕೇಶವಮೂರ್ತಿ, ಉಪ ನಿರೀಕ್ಷಕರಾದ ಪಾಂಡುರಂಗ, ಸ್ವರ್ಣಶ್ರೀ, ರಂಜನ್, ಅಬ್ದುಲ್ ನಿಸಾರ್ ಹಾಗೂ ಸಿಬ್ಬಂದಿ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net