ತಳ ಸಮುದಾಯದ ಕಲೆ ಉಳಿಸಬೇಕಿದೆ

CTD 3 BARAGAVI-03
Published on

ಚಿತ್ರದುರ್ಗ: ಪಿತ್ರಾರ್ಜಿತ ಆಸ್ತಿ ರಕ್ಷಣೆಯಂತೆ ನಶಿಸುತ್ತಿರುವ ತಳ ಸಮುದಾಯದ ವಿಶಿಷ್ಟ ಕಲೆಗಳನ್ನು ಕಾಪಾಡಿಕೊಳ್ಳಲು ಹೆಚ್ಚು ಕಾಳಜಿ ವಹಿಸಬೇಕಿದೆ ಎಂದು ಮೂಲ ಮತ್ತು ಕನ್ನಡ ಸಂಸ್ಕೃತಿ ಜಿಲ್ಲಾ ಸಮಿತಿ ಜಿಲ್ಲಾ ಸಂಚಾಲಕಿ ಭಾರ್ಗವಿ ದ್ರಾವಿಡ್ ಹೇಳಿದರು.

ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ನಗರದ ತರಾಸು ರಂಗಮಂದಿರದಲ್ಲಿ ಶುಕ್ರವಾರ ಆಯೋಜಿಸಿದ್ದ ‘ಮೂಲ ಸಂಸ್ಕೃತಿ, ಕನ್ನಡ ಸಂಸ್ಕೃತಿ’ ನಶಿಸಿ ಹೋಗುತ್ತಿರುವ ತಳ ಸಮುದಾಯದ ವಿಶಿಷ್ಟ ಕಲೆಗಳ ತರಬೇತಿ ಶಿಬಿರ ಉದ್ಘಾಟಿಸಿ ಮಾತನಾಡಿದರು.

ಕಣ್ಮರೆ ಆಗುತ್ತಿರುವ ಗ್ರಾಮೀಣ, ಶೋಷಿತ ವರ್ಗದ ಕಲೆಗಳನ್ನು ಸಮಾಜದ ಮುಖ್ಯವಾಹಿನಿಗೆ ತರಬೇಕೆಂಬುದು ರಾಜ್ಯ ಸರ್ಕಾರದ ಉದ್ದೇಶವಾಗಿದೆ. 20 ದಿನಗಳ ಈ ಶಿಬಿರದ ಪ್ರಯೋಜನ ಪಡೆದು ಆ ನಿಟ್ಟಿನಲ್ಲಿ ಹೆಜ್ಜೆ ಹಾಕಬೇಕು ಎಂದು ಶಿಬಿರಾರ್ಥಿಗಳಿಗೆ ಸಲಹೆ ನೀಡಿದರು.

ಸಮಿತಿ ಸದಸ್ಯ ಹುಲ್ಲೂರು ಕೃಷ್ಣಪ್ಪ ಮಾತನಾಡಿ, ಇತ್ತೀಚಿನ ದಿನಗಳಲ್ಲಿ ವಿಶಿಷ್ಟ ಕಲೆಗಳು ನಶಿಸಿ ಹೋಗುತ್ತಿವೆ ಎಂದು ಕಳವಳ ವ್ಯಕ್ತಪಡಿಸಿದರು. ಮತ್ತೊಬ್ಬ ಸದಸ್ಯ ಡಿ.ಒ.ಮುರಾರ್ಜಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಎಸ್.ಕೆ.ಮಲ್ಲಿಕಾರ್ಜುನ, ಸಮಿತಿ ಸದಸ್ಯ ನಿಂಗಪ್ಪ, ಹಿರಿಯ ಕಲಾವಿದರಾದ ಹನುಮಂತಪ್ಪ, ಮಾರಕ್ಕ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net