ಯುವಕನಿಗೆ ಚಾಕುವಿನಿಂದ ಇರಿದ ದುಷ್ಕರ್ಮಿಗಳು

Published on

ಮೈಸೂರು: ಹಳೇ ದ್ವೇಷ ಹಿನ್ನೆಲೆಯಲ್ಲಿ ದುಷ್ಕರ್ಮಿಗಳ ಗುಂಪೊಂದು ಯುವಕನಿಗೆ ಚಾಕುವಿನಿಂದ ಇರಿದು ಕೊಲೆಗೆ ಯತ್ನ ನಡೆಸಿದೆ.
ನಗರದ ಮೇದರಕೇರಿಯ ಕುಮಾರ್ (24) ಚಾಕು ಇರಿತಕ್ಕೆ ಒಳಗಾಗಿ ಸಾವು, ಬದುಕಿನ ನಡುವೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ನೂರೊಂದು ಗಣಪತಿ ದೇವಸ್ಥಾನ ಬಳಿ ಶನಿವಾರ ರಾತ್ರಿ ಬಂದಿದ್ದ ಕುಮಾರ್‌ನನ್ನು ಹಿಂಬಾಲಿಸಿ ಸ್ಕೂಟರ್‌ನಲ್ಲಿ ಬಂದ ಮೂವರು ದುಷ್ಕರ್ಮಿಗಳ ತಂಡ, ಚಾಕುವಿನಿಂದ 3 ರಿಂದ 4 ಬಾರಿ ಇರಿದಿದೆ. ಈ ವೇಳೆ ಕುಮಾರ್ ಕೂಗಾಡಿದಾಗ ದುಷ್ಕರ್ಮಿಗಳು ಸ್ಥಳದಿಂದ ಪರಾರಿಯಾಗಿದ್ದಾರೆ. ವಿಷಯ ತಿಳಿದು ಸ್ಥಳಕ್ಕಾಗಮಿಸಿದ ಕೃಷ್ಣರಾಜ ಪೊಲೀಸರು, ರಕ್ತದ ಮಡುವಿನಲ್ಲಿ ಬಿದ್ದಿದ್ದ ಕುಮಾರ್‌ನನ್ನು ಸಾರ್ವಜನಿಕರ ಸಹಾಯದಿಂದ ಖಾಸಗಿ ಆಸ್ಪತ್ರೆ ದಾಖಲಿಸಿದ್ದಾರೆ.
ಕುಮಾರ್ ಸ್ಥಿತಿ ಗಂಭೀರವಾಗಿದ್ದು, 24 ಗಂಟೆಗಳ ಕಾಲ ನಿಗಾ ಘಟಕದಲ್ಲಿ ಇರಿಸಲಾಗಿದೆ. ಪ್ರಕರಣ ದಾಖಲಿಸಿಕೊಂಡಿರುವ ಕೃಷ್ಣರಾಜ ಠಾಣೆ ಪೊಲೀಸರು, ದುಷ್ಕರ್ಮಿಗಳ ಪತ್ತೆ ಕಾರ್ಯ ನಡೆಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net