ಕಾಂಗ್ರೆಸ್ಸಿನ ಅಂತ್ಯದ ಆರಂಭ

JS
Published on

ವಿಜಯವಾಣಿ ಸುದ್ದಿಜಾಲ ಹುಬ್ಬಳ್ಳಿ:

ಕಾಂಗ್ರೆಸ್ ಪಕ್ಷ, ರಾಷ್ಟ್ರೀಯ ಸ್ವಯಂಸೇವಕ ಸಂಘವನ್ನು ಎದುರು ಹಾಕಿಕೊಂಡಿದೆ. ಇದು ಕಾಂಗ್ರೆಸ್ಸಿನ ಅಂತ್ಯದ ಆರಂಭ ಎಂದು ಬೆಳಗಾವಿ ಸಂಸದ ಜಗದೀಶ ಶೆಟ್ಟರ್ ಹೇಳಿದರು.

ಹುಬ್ಬಳ್ಳಿಯಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಆರ್​ಎಸ್​ಎಸ್ ಎದುರು ಹಾಕಿಕೊಂಡಿದ್ದೀರಾ, ಭಸ್ಮ ಆಗ್ತೀರಾ ಎಂದು ಆಕ್ರೋಶ ವ್ಯಕ್ತಪಡಿಸಿದ ಅವರು ಸಿದ್ದರಾಮಯ್ಯ ಆಂಡ್ ಕಂಪನಿ ಹಿಂದು ಸಮಾಜವನ್ನು ಒಡೆಯುವ ಕೆಲಸ ಮಾಡುತ್ತಿದ್ದಾರೆ ಎಂದರು.

ರಾಜ್ಯದಲ್ಲಿ ಆಡಳಿತ ವ್ಯವಸ್ಥೆ ಸಂಪೂರ್ಣ ಕುಸಿದಿದೆ. ಆರ್ಥಿಕವಾಗಿ ದಿವಾಳಿಯಾಗಿದೆ. ಕಾಮಗಾರಿ ನಿರ್ವಹಿಸಿದ ಗುತ್ತಿಗೆದಾರರಿಗೆ ನೀಡಲು ಹಣವಿಲ್ಲ. ಭ್ರಷ್ಟಾಚಾರ ಮಿತಿ ಮೀರಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಆಡಳಿತದಲ್ಲಿ ಬಿಗು ಕಳೆದುಕೊಂಡಿದ್ದಾರೆ ಎಂದು ಆರೋಪಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net