ಮಲಯಾಳಿ ಸಮಾಜದ ಜನರ ಒಗ್ಗೂಡುವಿಕೆಗೆ ನಾಂದಿ

02
ಸುಂಟಿಕೊಪ್ಪ ಮಲಯಾಳಿ ಸಮಾಜದ ವತಿಯಿಂದ 18ನೇ ವರ್ಷದ ಓಣಂ ಆಚರಣೆ ಪ್ರಯುಕ್ತ ಸುಂಟಿಕೊಪ್ಪದ ಜಿ.ಎಂ.ಪಿ.ಶಾಲಾ ಮೈದಾನದಲ್ಲಿ ಆಯೋಜಿಸಿದ್ದ ಸಮುದಾಯದ ಜನರಿಗೆ ವಿವಿಧ ಕ್ರೀಡಾಕೂಟ ಉದ್ಘಾಟನೆ ಕಾರ್ಯಕ್ರಮದಲ್ಲಿ ಹಗ್ಗ ಜಗ್ಗಾಟ ಸ್ಪರ್ಧೆ.
Published on

ಸುಂಟಿಕೊಪ್ಪ: ಕ್ರೀಡೆಯು ಮಾನವನ ಮಾನಸಿಕ, ಶಾರೀರಿಕ ಬೆಳವಣಿಗೆಗೆ ಸಹಕಾರಿಯಾಗುತ್ತದೆ. ಸಮುದಾಯದ ಜನರ ಒಗ್ಗೂಡುವಿಕೆಗೆ ವೇದಿಕೆ ಕಲ್ಪಿಸುತ್ತದೆ ಎಂದು ಮಡಿಕೇರಿ ಮಲಯಾಳಿ ಸಮಾಜದ ಅಧ್ಯಕ್ಷರೂ ಆದ ಮಡಿಕೇರಿ ನಗರಸಭಾ ಸದಸ್ಯ ಕೆ.ಎಸ್.ರಮೇಶ್ ಹೇಳಿದರು.

ಸುಂಟಿಕೊಪ್ಪ ಮಲಯಾಳಿ ಸಮಾಜದ ವತಿಯಿಂದ 18ನೇ ವರ್ಷದ ಓಣಂ ಆಚರಣೆ ಪ್ರಯುಕ್ತ ಸುಂಟಿಕೊಪ್ಪದ ಜಿ.ಎಂ.ಪಿ.ಶಾಲಾ ಮೈದಾನದಲ್ಲಿ ಆಯೋಜಿಸಿದ್ದ ಸಮುದಾಯದ ಜನರಿಗೆ ವಿವಿಧ ಕ್ರೀಡಾಕೂಟ ಉದ್ಘಾಟನೆ ಕಾರ್ಯಕ್ರಮದಲ್ಲಿ ಮಾತನಾಡಿ, ಮಕ್ಕಳ ಪ್ರತಿಭೆ ಈ ಕ್ರೀಡಾಕೂಟದಿಂದ ಹೊರ ಹೊಮ್ಮಲಿದೆ. ಸ್ನೇಹ ಸಮ್ಮಿಲನಕ್ಕೆ ನಾಂದಿಯಾದಲಿದೆ ಎಂದು ತಿಳಿಸಿದರು.

ಕ್ರೀಡಾಕೂಟವನ್ನು ಉದ್ಯಮಿ ಅಯ್ಯಪ್ಪ ನಾಯರ್ ಉದ್ಘಾಟಿಸಿದರು. ಸುಂಟಿಕೊಪ್ಪ ಮಲಯಾಳಿ ಸಮಾಜದ ಅಧ್ಯಕ್ಷ ರಮೇಶ್‌ಪಿಳ್ಳೆ, ಸುಂಟಿಕೊಪ್ಪ ಮಲಯಾಳಿ ಸಮಾಜದ ಮಾಜಿ ಅಧ್ಯಕ್ಷರಾದ ಪಿ.ಆರ್.ಸುಕುಮಾರ್, ಎಂ.ಆರ್.ಶಶಿಕುಮಾರ್, ಪ್ರಧಾನ ಕಾರ್ಯದರ್ಶಿ ಕೆ.ಎಸ್.ಅನಿಲ್‌ಕುಮಾರ್,ಪ್ರಕಾಶ್, ಸೋಮವಾರಪೇಟೆ ತಾಲೂಕು ಮಲಯಾಳಿ ಸಮಾಜದ ಸ್ಥಾಪಕ ಅಧ್ಯಕ್ಷ ಪ್ರಕಾಶ್ ಇದ್ದರು.

ಜಿಲ್ಲಾ ಮಟ್ಟದ ಹಗ್ಗ ಜಗ್ಗಟ ಸ್ಪರ್ಧೆಗೆ ಜಿಲ್ಲೆಯ ವಿವಿಧ ಭಾಗಗಳಿಂದ 8 ಮಹಿಳಾ ತಂಡ ಮತ್ತು ಪುರುಷರ ವಿಭಾಗದಲ್ಲಿ 6 ತಂಡಗಳು ಭಾಗವಹಿಸಿದ್ದವು. ಅಲ್ಲದೆ ಗ್ರಾಮೀಣ ಕ್ರೀಡಾಕೂಟಗಳಲ್ಲಿ ಸುಂಟಿಕೊಪ್ಪ ಮಲಯಾಳಿ ಸಮುದಾಯದ ಮಕ್ಕಳು, ಯುವಕರು, ಮಹಿಳೆಯರು, ಪುರುಷರು ಸೇರಿದಂತೆ ಹಿರಿಯರು ಕ್ರೀಡಾಕೂಟದಲ್ಲಿ ಪಾಲ್ಗೊಂಡು ಸಂತಸ ವ್ಯಕ್ತಪಡಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net