

ಮಳವಳ್ಳಿ: ತಾಲೂಕಿನ ನೆಲಮಾಕನಹಳ್ಳಿ ಸಮೀಪದ ಮದ್ದೂರು-ಮಳವಳ್ಳಿ ಮುಖ್ಯರಸ್ತೆಯ ಬದಿಯಲ್ಲಿ ನಿಂತಿದ್ದ ಟ್ರ್ಯಾಕ್ಟರ್‌ಗೆ ಗುರುವಾರ ರಾತ್ರಿ ನಿಯಂತ್ರಣ ತಪ್ಪಿ ಹಿಂಬದಿಯಿಂದ ಬೈಕ್ ಡಿಕ್ಕಿ ಹೊಡೆದು ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾರೆೆ.
ತಾಲೂಕಿನ ಮಾರ್ಕಾಲು ಗ್ರಾಮದ ಸಿದ್ದಯ್ಯ ಎಂಬುವರ ಪುತ್ರ ಶಿವಕುಮಾರ್(24) ಮೃತರು. ಇವರು ಖಾಸಗಿ ಕಂಪನಿಯೊಂದರ ಡೆಲಿವರಿ ಬಾಯ್ ಆಗಿ ಕೆಲಸ ಮಾಡುತ್ತಿದ್ದು, ಪಾರ್ಸಲ್ ಡೆಲಿವರಿ ಮಾಡಿ ಪಟ್ಟಣದ ಕಡೆಗೆ ವಾಪಸಾಗುತ್ತಿದ್ದ ವೇಳೆ ರಸ್ತೆ ಬದಿಯಲ್ಲಿ ಮರ ತುಂಬಿಸಿಕೊಂಡು ನಿಂತಿದ್ದ ಟ್ರ್ಯಾಕ್ಟರ್‌ಗೆ ನಿಯಂತ್ರಣ ತಪ್ಪಿ ಹಿಂಬದಿಯಿಂದ ಡಿಕ್ಕಿ ಹೊಡೆದ್ದಾರೆ. ಡಿಕ್ಕಿ ರಭಸಕ್ಕೆ ಶಿವಕುಮಾರ್ ಅವರ ತಲೆಯ ಭಾಗಕ್ಕೆ ತೀವ್ರವಾಗಿ ಪೆಟ್ಟು ಬಿದ್ದು, ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ. ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ ಪೊಲೀಸರು, ಮೃತದೇಹವನ್ನು ಪಟ್ಟಣದ ಸಾರ್ವಜನಿಕ ಆಸ್ಪತ್ರೆಯ ಶವಾಗಾರಕ್ಕೆ ರವಾನಿಸಿದರು. ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.